ಸಮಗ್ರ ನ್ಯೂಸ್:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು “ವಸುದೈವ ಕುಟುಂಬಕ್ಕಾಗಿ ಯೋಗ’ ‘ಹರ್ ಆಂಗನ್ ಯೋಗ” ಎಂಬ ಘೋಷ ವ್ಯಾಕ್ಯದೊಂದಿಗೆ ಇಂದು ಬೆಳಗ್ಗೆ ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ಶಿಸ್ತು ಬದ್ಧವಾಗಿ ಜರುಗಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ. ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ ಇತರರು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿಗಳು ಹಾಗೂ ಜಿ. ಪಂ. ಕಾರ್ಯನಿರ್ವಹಣಾಧಿಕಾರಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ದಿನದ ಅಂಗವಾಗಿ ಯೋಗ ಗುರುಗಳಿಗೆ ಸನ್ಮಾನವನ್ನು ನೆರವೇರಿಸಿದರು.