Ad Widget .

ನಾಲ್ಕನೇ ದಿನವೂ ಗೃಹ ಯೋಜನೆಗೆ ಸರ್ವರ್ ಸಮಸ್ಯೆ| ಅರ್ಜಿ ಸಲ್ಲಿಸಲು ಗ್ರಾಹಕರ ಪರದಾಟ

ಸಮಗ್ರ ನ್ಯೂಸ್: ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ನಾಲ್ಕನೇ ದಿವೂ ಸರ್ವರ್ ಸಮಸ್ಯೆ ಎದುರಾಗಿದೆ.

Ad Widget . Ad Widget .

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಬ್ಯೂಸಿ ಆದ ಕಾರಣ ಹಲವಡೆ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಹೋದವರು ಪರದಾಡುವಂತಾಗಿದೆ.

Ad Widget . Ad Widget .

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಗೃಹ ಬಳಕೆಯ ಗ್ರಾಹಕರಿಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತ ಯೋಜನೆಗೆ ಅರ್ಜಿ ಸಲ್ಲಿಕೆ ಶುರುವಾಗಿ ನಾಲ್ಕು ದಿನವಾಗಿದೆ, ಇಂದೂ ಸಹ ಕೆಲವಡೆ ಸರ್ವರ್ ಡೌನ್ ಆದ ಪರಿಣಾಮ ಅರ್ಜಿ ಸಲ್ಲಿಸಲು ಪರದಾಡುವಂತಾಗಿದೆ.

ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ http://sevasindhugs.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸರ್ವರ್ ಸಮಸ್ಯೆಯ ನಡುವೆಯೂ ರಾಜ್ಯಾದ್ಯಂತ ಕಳೆದ ಮೂರು ದಿನಗಳಲ್ಲಿ ಒಟ್ಟು 8,16,631 ಗ್ರಾಹಕರು ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಮಂಗಳವಾರ ಸಂಜೆ ವೇಳೆಗೆ ಒಟ್ಟು 8,16,631 ಮುಟ್ಟಿದ್ದು, ಕಳೆದ ಎರಡು ದಿನಗಳಿಗೆ ಹೋಲಿಸಿದರೆ, ನೋಂದಣಿ ಸಂಖ್ಯೆ ಮೂರು ಪಟ್ಟು ಹೆಚ್ಚಳಗೊಂಡಿದೆ. 200 ಯೂನಿಟ್‌ ವರೆಗಿನ ಉಚಿತ ವಿದ್ಯುತ್‌ ಪಡೆಯುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯ ಲಾಭ ಪಡೆಯಲು ಸಾರ್ವಜನಿಕರು ಭಾರೀ ಉತ್ಸುಕತೆ ತೋರುತ್ತಿದ್ದಾರೆ.

Leave a Comment

Your email address will not be published. Required fields are marked *