Ad Widget .

ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡುವ ಪೋಷಕರಿಗೆ ಬಿಗ್ ಶಾಕ್ | 20 ಸಾವಿರ ರೂ. ದಂಡ ವಿಧಿಸಿದ ಕೋರ್ಟ್!

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕರಿಗೆ ವಾಹನ ಚಾಲನೆ ಮಾಡುವ ನೀಡುವ ಪೋಷಕರಿಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 20 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

Ad Widget . Ad Widget .

ಅಪ್ರಾಪ್ತ ಬಾಲಕ ಬೈಕ್‌ ಚಾಲನೆ ಮಾಡಿದ ತಪ್ಪಿಗೆ ಪೋಷಕರಿಗೆ 20 ಸಾವಿರ ರೂ. ದಂಡ ವಿಧಿಸಿ ತೀರ್ಥಹಳ್ಳಿ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿಯ ಕುಶಾವತಿ ಬಳಿ ಡಿವೈಎಸ್‌ಪಿ ಗಜಾನನ ವಾಮನ ಸುತರ ವಾಹನ ತಪಾಸಣೆ ‌ನಡೆಸುತ್ತಿದ್ದರು. ವಾಹನ ತಪಾಸಣೆ ವೇಳೆ ಹೆಲ್ಮೆಟ್ ಧರಿಸದೇ ಅಪ್ರಾಪ್ತ ಬೈಕ್ ಚಾಲನೆ ಮಾಡಿರುವುದು ಪತ್ತೆಯಾಗಿದೆ.ಅಪ್ರಾಪ್ತ ಬಾಲಕ ಬೈಕ್‌ ಚಾಲನೆ ಮಾಡಿದ್ದಷ್ಟೇ ಅಲ್ಲ, ಹೆಲ್ಮೆಟ್‌ ಧರಿಸದೇ ಬೈಕ್‌ ಚಲಾಯಿಸಿ ನಿಯಮ ಉಲ್ಲಂಘಿಸಿದ್ದ.

Ad Widget . Ad Widget .

ಪರಶೀಲನೆ ವೇಳೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕಳ್ಳಿಗದ್ದೆ ಗ್ರಾಮದ ಪ್ರಮೋದ್ ಎಂಬವರಿಗೆ ಸೇರಿದ ಬೈಕ್ ಆಗಿದ್ದು, ಪೊಲೀಸರು ಘಟನೆ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ನ್ಯಾಯಾಧೀಶರು ವಿಚಾರಣೆ ನಡೆಸಿದ್ದರು. ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ 20 ಸಾವಿರ ದಂಡ ವಿಧಿಸಿ ಕೋರ್ಟ್‌ ತೀರ್ಪು ನೀಡಿದೆ.

Leave a Comment

Your email address will not be published. Required fields are marked *