ಕಡಬ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯಯಕ್ತ ಬಲೆಗೆ

ಸಮಗ್ರ ನ್ಯೂಸ್: ಪಿಡಿಓನೋರ್ವ ಅರ್ಜಿದಾರನ್ನು ಸತಾಯಿಸಿ ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ ಬಲೆಗೆ ಬಿದ್ದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

Ad Widget ... ..

ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಮಹೇಶ್ ಎಂಬಾತ ಅರ್ಜಿದಾರರಿಂದ ಖಾತೆ ಬದಲಾವಣೆಗೆ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ನೊಂದು ನೇರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Ad Widget

ಜೂನ್ 22 ರಂದು ಲಂಚದ 20 ಸಾವಿರ ರೂಪಾಯಿ ಹಣ ಅರ್ಜಿದಾರರಿಂದ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಲೋಕಾಯುಕ್ತ ಎಸ್ಪಿ ಸೈಮನ್ , ಡಿವೈಎಸ್ಪಿ ಚೆಲುವರಾಜ್ , ಡಿವೈಎಸ್ಪಿ ಕಲಾವತಿ , ಇನ್ಸ್‌ಪೆಕ್ಟರ್ ಅಮಾನುಲ್ಲಾ ,ಇನ್ಸ್‌ಪೆಕ್ಟರ್ ವಿನಯಕ ಬಿಲ್ಲವ, ನೇತೃತ್ವದ ಸಿಬ್ಬಂದಿ ಕಾರ್ಯಾಚರಣೆ ಭಾಗವಹಿಸಿದ್ದರು.

Leave a Comment

Your email address will not be published. Required fields are marked *