ಕಡಬ: ರೈಲ್ವೆ ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡುಕೊಂಡಿರುವ ಘಟನೆ ಬುಧವಾರ ರಾತ್ರಿ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ.

Ad Widget ... ..

ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಎಲಿಮಲೆ ರಬ್ಬರ್ ಪ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು ಆದರೆ ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದು ತಿಳಿದುಬಂದಿದೆ.

Ad Widget

ಇದೀಗ ಇವರು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *