ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುಂಗಾರು ಕೊಂಚ ಸುಧಾರಣೆಗೊಂಡಿದ್ದು, ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

Ad Widget

ಸಮುದ್ರಕ್ಕೆ ಇಂದು ಕೂಡ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಭಾರಿ ಮಳೆಯಾಗುವ ಸಾಕಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *