ಸಮಗ್ರ ನ್ಯೂಸ್: ತೀವ್ರ ರಕ್ತಸ್ರಾವದಿಂದಾಗಿ ಬಾಣಂತಿ ಆಶಾ ಕಾರ್ಯಕರ್ತೆ ಮೃತಪಟ್ಟ ಬೆನ್ನಲ್ಲೇ ಇದೀಗ ಕೂಸು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆಶಾ ಕಾರ್ಯಕರ್ತೆ ಭವ್ಯ(28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ್ದರು. ಇದರ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಭವ್ಯರವರು ತನ್ನ 3ನೇ ಹೆರಿಗೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮಂಗಳವಾರ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದರು. ಜನಿಸಿದ ಮಗುವನ್ನು ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗುವೂ ಮೃತಪಟ್ಟಿದೆ ಎನ್ನಲಾಗಿದೆ.
ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಮೃತಪಟ್ಟ ಮಹಿಳೆ. ಆದರೂ ಅವರು ಜನ್ಮನೀಡಿದ ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿತ್ತು
ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಯೂ ಚಿಕಿತ್ಸೆ ಫಲಕಾರಿ ಆಗದೆ ಜೂ. 21ರಂದು ಬೆಳಿಗ್ಗೆ ಮೃತಪಟ್ಟಿದ್ದರು.