ಸಮಗ್ರ ನ್ಯೂಸ್:ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈಗಾಗಲೇ ನಾನು ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ. ಬಳ್ಳಾರಿಯಲ್ಲಿ ನಡೆಯದ ಕಾರ್ಯಕ್ರಮದಲ್ಲಿ ನಳೀನ್ ಕುಮಾರ್ ಕಟೀಲ್ ಇದನ್ನು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ ಎಂದು ಹೇಳಿದ್ದಾರೆ. ಈಗಾಗಲೇ ರಾಜೀನಾಮೆ ಪತ್ರವನ್ನು ಲಿಖಿತವಾಗಿಯೂ ಕಳಿಸಿದ್ದೇನೆ ಎಂದಿದ್ದಾರೆ. ಇನ್ನು ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿಯಾಗಿದ್ದು, ಹಿರಿಯ ನಾಯಕ ವಿ ಸೋಮಣ್ಣ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.
ಇದರ ಬೆನ್ನಲ್ಲಿಯೇ ಬಿಜೆಪಿಯಲ್ಲಿ ಮುಂದಿನ ಕಮಲಾಧಿಪತಿ ಯಾರಾಗ್ತಾರೆ ಎನ್ನುವ ಕುತೂಹಲವೂ ಹೆಚ್ಚಿದೆ. ವಿಪಕ್ಷ ನಾಯಕನೊಂದಿಗೆ ನೂತನ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುವ ಸವಾಲು ಬಿಜೆಪಿಯ ಮುಂದಿದೆ. ವಿ ಸೋಮಣ್ಣ ಅಲ್ಲದೆ, ಅಶ್ವತ್ಥ್ ನಾರಾಯಣ್, ಸಿಟಿ ರವಿ ಹಾಗೂ ಆರ್.ಅಶೋಕ್ ಅವರ ಹೆಸರೂ ಕೂಡ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹರಿದಾಡುತ್ತಿದೆ.