ಕ್ರಿಕೆಟಿಗ ಕೆ.ಎಲ್.ರಾಹುಲ್ ಧರ್ಮಸ್ಥಳ ಹಾಗೂ ಕುಕ್ಕೆಗೆ ಭೇಟಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಹೆಸರಾಂತ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಮಂಗಳೂರಿನ ಕೆ.ಎಲ್.ರಾಹುಲ್ ಇಂದು ಭೇಟಿ ನೀಡಿದರು.

Ad Widget . Ad Widget . Ad Widget . Ad Widget . Ad Widget . Ad Widget .

ಕೆ.ಎಲ್. ರಾಹುಲ್‌ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡರು. ಆ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು.
ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಮಂಗಳೂರು ಮೂಲದ ಕ್ರಿಕೆಟಿಗ ರಾಹುಲ್‌ ಕೆಲ ತಿಂಗಳ ಹಿಂದೆಯೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದೀಗ ಕುಕ್ಕೆಗೆ ಮತ್ತೊಮ್ಮೆ ಭೇಟಿ ನೀಡಿದ್ದಾರೆ.
ಐಪಿಎಲ್‌ ವೇಳೆ ಗಾಯಗೊಂಡಿದ್ದ ಕೆಎಲ್‌ ರಾಹುಲ್‌ ಬಳಿಕ ಲಂಡನ್‌ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಏಷ್ಯಾಕಪ್‌ ವೇಳೆಗೆ ಅವರು ತಂಡ ಸೇರುವ ನಿರೀಕ್ಷೆಯಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *