ಕಾಗವಾಡ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ| ಓರ್ವ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಹಾಗೂ ಉಗಾರ ಖುರ್ದ ಗ್ರಾಮದ ರಸ್ತೆ ನಡುವೆ ಕಾರು ಹಾಗೂ ಆಟೋ ರೀಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Ad Widget ... ..

ಅಟೋ ರಿಕ್ಷಾ ಐನಾಪುರದಿಂದ ಉಗಾರ ಖುರ್ದ ಗ್ರಾಮದ ಕಡೆ ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು ಆಟೋದಲ್ಲಿ ಪ್ರಯಾಣಿಸುತ್ತಿದ್ದ ಕೃಷ್ಣ ಕಿತ್ತೂರ್ ಗ್ರಾಮದ ನಿವಾಸಿ ವಿನೋದ್ ಕಾಂಬಳೆ (24)ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Ad Widget

ಇನ್ನು ಎಂಟು ಜನರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಥಣಿ ವಲಯದ ಡಿವೈಎಸ್ಪಿ ಶ್ರೀಪಾದ ಜಲ್ದೆ,ಸಿಪಿಐ ರವಿಂದ್ರ ನಾಯ್ಕೋಡಿ ಹಾಗೂ ಕಾಗವಾಡ ಪಿಎಸ್ಐ ಹಣಮಂತ ನೇರಳೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *