ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು (ಜೂನ್ 27) ಮತ್ತು ನಾಳೆ (ಜೂನ್ 28) ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 40-45 ಕಿಮೀ ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಂದು ಇಂದು ಕೂಡ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಬಹಳಷ್ಟು ಸಂಭವ ಇದೆ ಎಂದು ಐಎಂಡಿ ತನ್ನ ದೈನಂದಿನ ವರದಿಯಲ್ಲಿ ಹೇಳಿದೆ.
ರಾಜ್ಯದ ಕರಾವಳಿಯ ಬಹುತೇಕ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜೂನ್ 26, 27ರಂದು ಭಾರೀ ಮಳೆ ಬೀಳಲಿದೆ ಎಂದು ತಿಳಿಸಿದೆ. ಅದರಲ್ಲೂ ಹಲವು ದಿನಗಳಿಂದ ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಿನ್ನೆ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಬಿದ್ದಿದೆ. ಹಾಗೆಯೇ ಕುಂದಾಪುರ, ಕೋಟಾ, ಮಂಕಿಯಲ್ಲಿ 11 ಸೆಂ. ಮೀ. ಮಳೆ ದಾಖಲಾಗಿದೆ. ಸಿದ್ದಾಪುರ 10 ಸೆಂ.ಮೀ, ಶಿರಾಲಿ ತಲಾ 9 ಸೆಂ.ಮೀ., ಗೇರುಸೊಪ್ಪ 8 ಸೆಂ.ಮೀ., ಅಂಕೋಲಾ ಮತ್ತು ಕಾರ್ಕಳದಲ್ಲಿ ತಲಾ 7 ಸೆಂ.ಮೀ. ಮಳೆ ಬಿದ್ದಿದೆ ಎಂದು ತಿಳಿಸಿದೆ.