ಕಡಬ: ಆಡನ್ನು ನುಂಗಲು ಯತ್ನಿಸಿದ ಹೆಬ್ಬಾವು !

ಸಮಗ್ರ ನ್ಯೂಸ್: ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರ ಸಂಜೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ನಡೆದಿದೆ.

Ad Widget ... ..

ಸ್ಥಳೀಯ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಆಡಿನ ತಲೆಯ ಭಾಗವನ್ನು ಹೆಬ್ಬಾವು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು ಸತ್ತ ಆಡನ್ನು ಸ್ಥಳದಲ್ಲೇ ಬಿಟ್ಟು ಪೊದೆಯೊಳಗೆ ಸೇರಿಕೊಂಡಿದೆ.

Ad Widget

Leave a Comment

Your email address will not be published. Required fields are marked *