ಸಮಗ್ರ ನ್ಯೂಸ್: ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲೆಯ ಶನಿವಾರಸಂತೆ ಮತ್ತು ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ತನಿಖೆಯನ್ನು ಕೈಗೊಂಡ ಪೊಲೀಸರು ದಿನಾಂಕ 25-06-2023 ರಂದು ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಆರೋಪಿ ಮಂಜುನಾಥ್ ಎಂಬಾತನನ್ನು ದಸ್ತಗಿರಿ ಮಾಡಿ ಆತನಿಂದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿತ್ತು.
ಈ ಕಾರ್ಯಾಚರಣೆಯನ್ನು ಆರ್.ವಿ ಗಂಗಾಧರಪ್ಪ, ಡಿವೈಎಸ್ಪಿ ಸೋಮವಾರಪೇಟೆ ಉಪ ವಿಭಾಗ, ಪರಶಿವಮೂರ್ತಿ ಎಸ್.ಪಿ.ಐ. ಶನಿವಾರಸಂತೆ ಠಾಣೆ ಮತ್ತು ಸಿಬ್ದಂದಿಗಳ ತಂಡ ನಡೆಸಿದ ಕಾರ್ಯವನ್ನು ಪ್ರಶಂಸಲಾಯಿತು.