ಎಕ್ಸ್‌ಪ್ರೆಸ್ ಹೈವೇನಲ್ಲಿ ಮತ್ತೊಂದು ಅಪಘಾತ| ಬೊಲೆರೋ ಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಎಲೆಕ್ಟ್ರಿಕ್ ಬಸ್| ಬಸ್ ಕಂಡಕ್ಟರ್ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಬುಧವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್‌ಆರ್ ಟಿಸಿ ಎಲೆಕ್ಟ್ರಿಕ್ ಬಸ್ ಢಿಕ್ಕಿಯಾದ ಪರಿಣಾಮ ಬಸ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget ... ..

ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಿಗೊಳಗಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ad Widget

ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು, ಈ ವೇಳೆ ಫ್ಲೈವುಡ್ ತುಂಬಿದ್ದ ಬೊಲೆರೋ ವಾಹನ ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

Leave a Comment

Your email address will not be published. Required fields are marked *