ಸಮಗ್ರ ನ್ಯೂಸ್: ಆಧಾರ್ -ಪಾನ್ ಕಾರ್ಡ್ ಜೋಡಣೆಗೆ ನಾಳೆ(ಜೂ.30) ಕೊನೆಯ ದಿನವಾಗಿದ್ದು, ಆಧಾರ್ ಜೋಡಣೆ ಮಾಡದಿದ್ದರೆ ಪಾನ್ ಕಾರ್ಡ್ ಅಮಾನ್ಯವಾಗಲಿದೆ.
ಬ್ಯಾಂಕ್, ಆರ್ಥಿಕ ಚಟುವಟಿಕೆಗಳಿಗೆ ಪಾನ್ ಕಾರ್ಡ್ -ಆಧಾರ್ ಕಾರ್ಡ್ ಜೋಡಣೆ ಕಡ್ಡಾಯವಾಗಿದ್ದು, ಬ್ಯಾಂಕ್ ಖಾತೆ ತೆರೆಯಲು, ನಿಗದಿತ ಠೇವಣಿಗಳಲ್ಲಿ ಹೂಡಿಕೆ ಮಾಡಲು, ಡಿಮ್ಯಾಟ್ ಅಕೌಂಟ್ ತೆರೆಯಲು ಪಾನ್ ಕಾರ್ಡ್ ಸಂಖ್ಯೆ ಕಡ್ಡಾಯವಾಗಿದೆ.
ನಾಳೆಯೊಳಗೆ ಆಧಾರ್ ಜೋಡಣೆ ಮಾಡಿಸದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ಹೇಳಲಾಗಿದ್ದು, ಜೋಡಣೆ ಮಾಡದವರು ಲಿಂಕ್ ಮಾಡಿಸಿಕೊಳ್ಳುವುದು ಒಳಿತು.