Ad Widget .

ರಿಷಬ್‌ ಶೆಟ್ಟಿಗೆ ಅಮೇರಿಕದಲ್ಲಿ “ವಿಶ್ವ ಕನ್ನಡಿಗ 2023” ಪ್ರಶಸ್ತಿ ಪ್ರಧಾನ | ಪಂಚೆ‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ ಇಂಟರ್ ನ್ಯಾಷನಲ್ ಸ್ಟಾರ್..!

ಸಮಗ್ರ ನ್ಯೂಸ್: ಕಾಂತಾರ ಸಿನಿಮಾದ ಬಳಿಕ ಇಂಟರ್ ನ್ಯಾಶನಲ್ ಸ್ಟಾರ್ ಎಂದೇ ಪ್ರಸಿದ್ಧರಾದ ರಿಷಬ್ ಶೆಟ್ಟಿ (RIshab Shetty) ಇದೀಗ ಅಮೆರಿಕ ರಾಜಧಾನಿ ವಾಷಿಂಗ್ಟನ್‌ ನಗರದ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ (Paramount Theatre) ನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಿಷಬ್ ಜೊತೆ ಪತ್ನಿ ಪ್ರಗತಿ ಶೆಟ್ಟಿ ಈ ಸುಸಂದರ್ಭದಲ್ಲಿ ಜೊತೆಯಾಗಿದ್ದು, ರಿಷಬ್ ಪಂಚೆ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ್ದು ಅಲ್ಲಿನ ಜನರ ಮನಸೆಳೆಯುವಂತಿತ್ತು.

Ad Widget . Ad Widget .

ಈ ಪ್ರಶಸ್ತಿಯನ್ನು ಅಮೆರಿಕದ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ|ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು.

Ad Widget . Ad Widget .

ಅಮೇರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ “ಕಾಂತಾರ” ಸಿನಿಮಾವನ್ನು ಯುನಿವರ್ಸಲ್‌ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೇರಿಕಾದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು.

ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದ್ದು ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದಾರೆ‌. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ನಡೆದ ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ಪ್ರಶಸ್ತಿ ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ. ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. ಈ ಸಂದರ್ಭದಲ್ಲಿ 1800 ಕ್ಕೂ ಹೆಚ್ಚು ಕನ್ನಡಿಗರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Leave a Comment

Your email address will not be published. Required fields are marked *