Ad Widget .

ಅನ್ನಭಾಗ್ಯ: 3 ತಿಂಗಳು ಮಾತ್ರ ಹಣ ನೀಡುತ್ತೇವೆ – ಗೃಹಸಚಿವ ಪರಮೇಶ್ವರ್!

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 10.ಕೆಜಿ ಅಕ್ಕಿ ವಿತರಣೆಗಾಗಿ ಕೇಂದ್ರ ಸರ್ಕಾರದೊಂದಿಗೆ ಜಟಾಪಟಿ ನಡೆಸಿದ್ದು, ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಮತ್ತು 170 ರೂಪಾಯಿ ಕೊಡುವುದಾಗಿ ಜೂನ್ 28ರಂದು ಘೋಷಿಸಿತ್ತು. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕುಟುಂಬಗಳಿಗೆ 5 ಕೆ.ಜಿ ಅಕ್ಕಿ ಬದಲು ಮೂರು ತಿಂಗಳು ಹಣ ನೀಡಲಾಗುವುದು. ಅಷ್ಟರಲ್ಲಿ ಅಕ್ಕಿ ಹೊಂದಿಸಿಕೊಂಡು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Ad Widget . Ad Widget .

ಅಕ್ಕಿ ಕೊಡದಿದ್ದರೆ ಹಣ ನೀಡಬೇಕು ಎಂದು ಬಿಜೆಪಿಯವರೇ ಒತ್ತಾಯಿಸಿದ್ದರು. ಆದರೆ ಈಗ ಹಣ ಕೊಡುವುದಕ್ಕೂ ವಿರೋಧ ಮಾಡುತ್ತಿದ್ದಾರೆ. ಆದರೂ, ಅಕ್ಕಿ ಬದಲು ಹಣ ಕೊಡುವುದಕ್ಕೆ ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಅಕ್ಕಿ ಕೊಟ್ಟೇಕೊಡುತ್ತೇವೆ, ಈಗ ದೇಶದ ಗೋದಾಮುಗಳಲ್ಲಿ ಅಕ್ಕಿ ಕೊಳೆಯುತ್ತಿದ್ದು, ಹಣ ಕೊಟ್ಟರೂ ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯದಲ್ಲಿರುವ ಭಾರತ ಆಹಾರ ನಿಗಮದ ಗೋದಾಮುಗಳಲ್ಲಿ 7 ಲಕ್ಷ ಟನ್ ಅಕ್ಕಿ ಇದೆ. ಅದನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದಾರೆ. ನಮಗೆ ಕೊಡಲು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಕ್ಕಿ ನೀಡುವುದು ಪ್ರತಿಷ್ಠೆ ವಿಚಾರ ಆಗಬಾರದು. ಬಡವರ ಹಸಿವಿನ ಪ್ರಶ್ನೆಯಾಗಬೇಕು. ಪ್ರತಿಷ್ಠೆ ಮಾಡಿದರೆ ಬಡವರ ಹೊಟ್ಟೆ ತುಂಬುವುದಿಲ್ಲ. ಬಿಜೆಪಿಯವರು ಬಡವರ ಹಸಿವಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಹೀಗೆ ರಾಜ್ಯ ಸರ್ಕಾರ ಗ್ಯಾರಂಟಿ ಪೂರೈಕೆಗೆ ಶತಾಯಗತಾಯ ಪ್ರಯತ್ನಪಡುತ್ತಿದೆ ಎಂದರು.

Leave a Comment

Your email address will not be published. Required fields are marked *