Ad Widget .

ವಿರಾಜಪೇಟೆ: ಮಾಲು‌ ಸಹಿತ ಗಾಂಜಾ ಮಾರಾಟಗಾರರ ಬಂಧನ

ಸಮಗ್ರ ನ್ಯೂಸ್: ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.

Ad Widget . Ad Widget .

ಈ ಘಟನೆಗೆ ಸಂಬಂಧಿಸಿದಂತೆ ಸುಂಕದಕಟ್ಟೆ ಬಳಿಯ ನಿವಾಸಿಗಳಾದ ಎಸ್. ಹರೀಶ್ (48) ಎಸ್. ಸಂತೋಷ್ (39) ಹಾಗೂ ಎಸ್.ಪಿ.ದೀಕ್ಷಿತ್ (23) ಎಂಬುವರನ್ನು ಬಂಧಿಸಿ 127 ಗ್ರಾಂ ಗಾಂಜಾ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಆರ್ ಮೋಹನ್ ಕುಮಾರ್ ರವರ ನೇತೃತ್ವದಲ್ಲಿ ರಚಿಸಲಾದ ತಂಡ ಈ ಅಕ್ರಮ ಚಟುವಟಿಕೆಯನ್ನು ಭೇದಿಸಿದೆ.

Ad Widget . Ad Widget .

ಪೊಲೀಸರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪ್ರಶಂಶಿಸಿದ್ದಾರೆ. ಯುವ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಮತ್ತು ಕೆ.ಎಸ್.ಪಿ ತಂತ್ರಾಂಶದ ಮೂಲಕ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವವರ ವಿವರಗಳನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Leave a Comment

Your email address will not be published. Required fields are marked *