Weather report: ಕರಾವಳಿಯ ಮೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್| ರಾಜ್ಯದಲ್ಲಿ ಉತ್ತಮ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget ... ..

ದ.ಕ, ಉಡುಪಿ, ಉ.ಕನ್ನಡ ಜಿಲ್ಲೆಗಳಿಗೆ ಗುರುವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆಯಿದೆ. ಕರಾವಳಿಯಲ್ಲಿ 40-45 ಕಿ.ಮೀ.ಯಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹೇಳಿದೆ.

Ad Widget

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಒಂದೆರಡು ಸಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *