Ad Widget .

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

Ad Widget . Ad Widget .

1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.

Ad Widget . Ad Widget .

ಪರೀಕ್ಷೆಗೆ ಹಾಜರಾದ 71,134 ಬಾಲಕರಲ್ಲಿ 27,705 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.38 ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ 40,647 ಬಾಲಕಿಯರಲ್ಲಿ 18,565 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಶೇ. 45.67ರಷ್ಟು ಫಲಿತಾಂಶ ದಾಖಲಾಗಿದೆ. ನಗರ ಪ್ರದೇಶದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 60,026 ವಿದ್ಯಾರ್ಥಿಗಳಲ್ಲಿ 24,192 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 40.30ರಷ್ಟು ಫಲಿತಾಂಶ ಬಂದರೆ, ಗ್ರಾಮಾಂತರ ಭಾಗದಲ್ಲಿ ಪರೀಕ್ಷೆಗೆ ಹಾಜರಾದ 51,755 ವಿದ್ಯಾರ್ಥಿಗಳಲ್ಲಿ 22,078 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.42.6 ರಷ್ಟು ಫಲಿತಾಂಶ ಬಂದಿದೆ.

44,12 ಸರ್ಕಾರಿ ಶಾಲೆಗಳ 51,941 ವಿದ್ಯಾರ್ಥಿಗಳಲ್ಲಿ 20,662 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.39.78 ರಷ್ಟು ಫಲಿತಾಂಶ ಬಂದಿದೆ. 3,154 ಅನುದಾನಿತ ಶಾಲೆಗಳ 33,213 ವಿದ್ಯಾರ್ಥಿಗಳಲ್ಲಿ 14,335 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.43.16 ರಷ್ಟು ಫಲಿತಾಂಶ ಬಂದಿದೆ. 4,248 ಅನುದಾನರಹಿತ ಶಾಲೆಗಳ 26,627 ವಿದ್ಯಾರ್ಥಿಗಳಲ್ಲಿ 11,273 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.42.34 ರಷ್ಟು ಫಲಿತಾಂಶ ದಾಖಲಾಗಿದೆ.

ಹಾಜರಾತಿ ಕೊರತೆಯಿಂದಾಗಿ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಲಾದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 2,446 ಅಭ್ಯರ್ಥಿಗಳಲ್ಲಿ 2,020 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 108 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಶೇ.5.35ರಷ್ಟು ಫಲಿತಾಂಶ ಪ್ರಕಟವಾಗಿದೆ.

ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸಲು http://karresult.nic.inಗೆ ಭೇಟಿ ನೀಡಿ

Leave a Comment

Your email address will not be published. Required fields are marked *