June 2023

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿರುವ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೂ.150 ಸೇವಾ ಕೇಂದ್ರಗಳು ವಸೂಲಿ ಮಾಡುತ್ತಿವೆ ಎನ್ನಲಾಗುತ್ತಿತ್ತು. ಈಗ ಗೃಹ ಲಕ್ಷ್ಮೀ ಯೋಜನೆಗೂ ಹಾಗೆ ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೀಗಾಗಿ ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಒಂದು ರೂ ಕೂಡ ಅರ್ಜಿ ಸಲ್ಲಿಸಲು ಕೊಡುವಂತಿಲ್ಲ. ಉಚಿತ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ಒಂದು […]

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಪೌರ ಕಾರ್ಮಿಕರಿಗೆ ಶುಭ ಸುದ್ದಿ| ಶೀಘ್ರದಲ್ಲೇ ಸೇವೆ ಖಾಯಂ ಸಾಧ್ಯತೆ

ಸಮಗ್ರ ನ್ಯೂಸ್: ಕಾಯಂ ನೇಮಕಾತಿಗಾಗಿ ಕಾಯುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಪೌರಕಾರ್ಮಿಕರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ ರಾಜ್ಯದ 32 ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿ ಅಡಿ ಕಾರ್ಯ ನಿರ್ವಹಿಸುತ್ತಿರುವ 40 ಸಾವಿರಕ್ಕೂ ಅಧಿಕ ಪೌರಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸಲು ಹಿಂದಿನ ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿದೆ. ಆದೇಶದ ಅನ್ವಯ ರಾಜ್ಯದ ವಿವಿಧ ಮಹಾನಗರ ಪಾಲಿಕೆ ಮತ್ತು ಸ್ಥಳೀಯ

ಪೌರ ಕಾರ್ಮಿಕರಿಗೆ ಶುಭ ಸುದ್ದಿ| ಶೀಘ್ರದಲ್ಲೇ ಸೇವೆ ಖಾಯಂ ಸಾಧ್ಯತೆ Read More »

ವಿರಾಜಪೇಟೆ: ಮಾಲು‌ ಸಹಿತ ಗಾಂಜಾ ಮಾರಾಟಗಾರರ ಬಂಧನ

ಸಮಗ್ರ ನ್ಯೂಸ್: ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಂಕದಕಟ್ಟೆ ಬಳಿಯ ನಿವಾಸಿಗಳಾದ ಎಸ್. ಹರೀಶ್ (48) ಎಸ್. ಸಂತೋಷ್ (39) ಹಾಗೂ ಎಸ್.ಪಿ.ದೀಕ್ಷಿತ್ (23) ಎಂಬುವರನ್ನು ಬಂಧಿಸಿ 127 ಗ್ರಾಂ ಗಾಂಜಾ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಆರ್ ಮೋಹನ್ ಕುಮಾರ್ ರವರ ನೇತೃತ್ವದಲ್ಲಿ ರಚಿಸಲಾದ ತಂಡ ಈ ಅಕ್ರಮ ಚಟುವಟಿಕೆಯನ್ನು

ವಿರಾಜಪೇಟೆ: ಮಾಲು‌ ಸಹಿತ ಗಾಂಜಾ ಮಾರಾಟಗಾರರ ಬಂಧನ Read More »

ಚಿಕ್ಕಮಗಳೂರು: ತ್ಯಾಗ ಬಲಿದಾನದ ಬಕ್ರಿದ್‌ ಆಚರಣೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಮಸೀದಿಕೆರೆಯ ಅಲ್ ಬದ್ರಿಯಾ ಜುಮಾ ಮಸೀದಿಯಲ್ಲಿ ತ್ಯಾಗ,ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬ ಆಚರಿಸಲಾಯಿತು. ನಮಾಝ್‌ಗೆ ನೇತೃತ್ವವನ್ನು ನೀಡಿದ ಮಸೀದಿಯ ಖತೀಬರಾದ ಸ್ವಾದಿಕ್ ಸಖಾಫಿ ಕರಿಂಬಿಲ ಇವರು ತ್ಯಾಗ,ಬಲಿದಾನ,ಶಾಂತಿ ಸೌಹಾರ್ದತೆಯ ಬಗ್ಗೆ ಭಾಷಣ ಮಾಡಿದರು. ನಮಾಝ್‌ನ ನಂತರ SSF ಮಸೀದಿಕೆರೆ ಯುನಿಟ್ ಇದರ ವತಿಯಿಂದ ಸೆಪ್ಟೆಂಬರ್ 10 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ವಿದ್ಯಾರ್ಥಿ ಸಮಾವೇಶ ಹಾಗೂ ನವೆಂಬರ್ ತಿಂಗಳಿನಲ್ಲಿ ಮುಂಬೈ‌ನ ಏಕತಾ ಉದ್ಯಾನದಲ್ಲಿ ನಡೆಯಲಿರುವ SSF ನ ಐವತ್ತನೇ ಸಂಭ್ರಮಾಚರಣೆಯ ಗೋಲ್ಡನ್

ಚಿಕ್ಕಮಗಳೂರು: ತ್ಯಾಗ ಬಲಿದಾನದ ಬಕ್ರಿದ್‌ ಆಚರಣೆ Read More »

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ (ಜೂ.30) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:30.06.2023 ರಂದು ಬೆಳಿಗ್ಗೆ 11.00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ನಾಳೆ ಬೆಳಿಗ್ಗೆ ವಿದ್ಯಾರ್ಥಿಗಳು 11 ಗಂಟೆಯ ಬಳಿಕ ಮಂಡಳಿಯ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ಫಲಿತಾಂಶವನ್ನು

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »

ಸುಬ್ರಹ್ಮಣ್ಯ: ಬಸ್ ಇಲ್ಲದೆ ಒದ್ದಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗಬಹುದೇ ಪರಿಹಾರ?

ಸಮಗ್ರ ನ್ಯೂಸ್:ಸುಳ್ಯದಿಂದ ಸುಬ್ರಹ್ಮಣ್ಯಕ್ಕೆ ಮುಂಜಾನೆ ಕಡಿಮೆ ಬಸ್ ಸಂಚಾರ ಇರುವುದರಿಂದ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ವಿದ್ಯಾಲಯ ತಲುಪುವುದು ಕಷ್ಟವಾಗುತ್ತಿದೆ. ಗುತ್ತಿಗಾರು, ನಡುಗಲ್ಲು, ಮರಕತ, ಕಲ್ಲಾಜೆಯಲ್ಲಿ ಬಸ್ ಸಂಪೂರ್ಣ ತುಂಬಿರುತ್ತದೆ ಹಾಗಾಗಿ ಬಸ್ ನಿಲ್ಲಿಸುವುದಿಲ್ಲ. ಕೆಲವೊಮ್ಮೆ ಬಸ್ ನಲ್ಲಿ ನೇತಾಡಿಕೊಂಡು ಹೋಗಬೇಕಾದ ಪರಿಸ್ಥಿತಿಯು ಎದುರಾಗುತ್ತದೆ. ಈ ಮಳೆಗೆ ನೇತಾಡಿಕೊಂಡು ಹೋಗುವುದು ಕಷ್ಟ. ಇನ್ನು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದಾಗಿ ಈ ಸಮಸ್ಯೆ ಇನ್ನೂ ಹೆಚ್ಚಾಗುತ್ತಿದೆ. ಹಾಗೆ ಈ ಭಾಗಕ್ಕೆ ಬಸ್ ಕಡಿಮೆ ಇರುವುದರಿಂದ ಹೆಚ್ಚುವರಿ

ಸುಬ್ರಹ್ಮಣ್ಯ: ಬಸ್ ಇಲ್ಲದೆ ಒದ್ದಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗಬಹುದೇ ಪರಿಹಾರ? Read More »

ಸುಳ್ಯ: ಇಂದಿರಾ ಕ್ಯಾಂಟೀನ್‌ಗೆ ಕಾಂಗ್ರೆಸ್ ಮುಖಂಡರ ಭೇಟಿ | ಸದ್ಯದಲ್ಲಿಯೇ ಹೊಸ ಮೆನು ನಿರೀಕ್ಷೆ

ಸಮಗ್ರ ನ್ಯೂಸ್: ಜನ ಸಾಮಾನ್ಯರಿಗೆ ಕಡಿಮೆ ದರದಲ್ಲಿ ಸ್ವಾದಿಷ್ಟ ಆಹಾರ ನೀಡಬೇಕು ಎಂದು ಈ ಹಿಂದಿನ ಸಿದ್ದರಾಮಯ್ಯ ಸರಕಾರ ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನ್ ಆರಂಭಿಸಿತ್ತು. ಅದರಂತೆ ಸುಳ್ಯದಲ್ಲಿಯೂ ಇಂದಿರಾ ಕ್ಯಾಂಟೀನ್ ಕಾರ್ಯಾರಂಭ ಮಾಡಿತ್ತು. ಸುಳ್ಯ ಮಿನಿವಿಧಾನ ಸೌಧದ ಬಳಿ ಇರುವ ಇಂದಿರಾ ಕ್ಯಾಂಟೀನ್ ಕಳೆದ ಹಲವು ವರ್ಷಗಳಿಂದ ಅನ್ನ ದಾಸೋಹ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ನೇತೃತ್ವದ ಸರಕಾರ ಮತ್ತೆ ಅಧಿಕಾರಕ್ಕೆ ಬಂದಿರುವ ಹಿನ್ನಲೆಯಲ್ಲಿ ಈ ಕ್ಯಾಂಟಿನ್‌‌ಗಳಿಗೆ ಇನ್ನಷ್ಟು ಕಾಯಕಲ್ಪ ನೀಡಿ ಕೆಲವೊಂದು ಬದಲಾವಣೆ ತರುವ ಸಾಧ್ಯತೆ ಇದೆ.

ಸುಳ್ಯ: ಇಂದಿರಾ ಕ್ಯಾಂಟೀನ್‌ಗೆ ಕಾಂಗ್ರೆಸ್ ಮುಖಂಡರ ಭೇಟಿ | ಸದ್ಯದಲ್ಲಿಯೇ ಹೊಸ ಮೆನು ನಿರೀಕ್ಷೆ Read More »

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಿಶು ಪೋಷಣಾ ಕೊಠಡಿ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ ಹಾಗೂ ಕಸ್ವಿ ಹಸಿರು ದಿಬ್ಬಣ ಇದರ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತೆರೆಯಲಾದ ಶಿಶು ಪೋಷಣಾ ಕೊಠಡಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಿಶು ಪೋಷಣಾ ಕೊಠಡಿ ಉದ್ಘಾಟಿಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಧರ್ಮ ಸಮ್ಮೇಳನ ಮಂಟಪದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ತಾಯಿ ತನ್ನ ಮಗುವನ್ನು ಪ್ರೀತಿಯಿಂದ ಹಾರೈಕೆ ಮಾಡುತ್ತಾಳೆ. ಮಗು ಕೂಗುವಾಗ ತಾಯಿಗೆ ಮಗುವನ್ನು ಜನ ಸಂದಣಿಯಲ್ಲಿ ಹಾರೈಕೆ

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಿಶು ಪೋಷಣಾ ಕೊಠಡಿ ಉದ್ಘಾಟನೆ Read More »

ಅನ್ನಭಾಗ್ಯ: 3 ತಿಂಗಳು ಮಾತ್ರ ಹಣ ನೀಡುತ್ತೇವೆ – ಗೃಹಸಚಿವ ಪರಮೇಶ್ವರ್!

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 10.ಕೆಜಿ ಅಕ್ಕಿ ವಿತರಣೆಗಾಗಿ ಕೇಂದ್ರ ಸರ್ಕಾರದೊಂದಿಗೆ ಜಟಾಪಟಿ ನಡೆಸಿದ್ದು, ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಮತ್ತು 170 ರೂಪಾಯಿ ಕೊಡುವುದಾಗಿ ಜೂನ್ 28ರಂದು ಘೋಷಿಸಿತ್ತು. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕುಟುಂಬಗಳಿಗೆ 5 ಕೆ.ಜಿ ಅಕ್ಕಿ ಬದಲು ಮೂರು ತಿಂಗಳು ಹಣ ನೀಡಲಾಗುವುದು. ಅಷ್ಟರಲ್ಲಿ ಅಕ್ಕಿ ಹೊಂದಿಸಿಕೊಂಡು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಕ್ಕಿ ಕೊಡದಿದ್ದರೆ

ಅನ್ನಭಾಗ್ಯ: 3 ತಿಂಗಳು ಮಾತ್ರ ಹಣ ನೀಡುತ್ತೇವೆ – ಗೃಹಸಚಿವ ಪರಮೇಶ್ವರ್! Read More »

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ಜೂ.29 ರಂದು ನಡೆಯಿತು. ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಕಾರ್ಯಾರಂಭ ಮಾಡಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ವೆಂಕಟ್ರಮಣ‌ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಭಾಗಿಯಾಗಿದ್ದರು. ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜನಾರ್ಧನ.ಡಿ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಸತ್ಯ ನಾರಾಯಣ‌ ಅಚ್ರಪ್ಪಾಡಿ,

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ Read More »