June 2023

ಸೌಜನ್ಯ ಕೊಲೆ ಪ್ರಕರಣ| ಇಂದು(ಜೂ.16) ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಕೊಲೆ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಜೂನ್‌ 16ರಂದು ಪ್ರಕಟಿಸಲಿದೆ. ಉಜಿರೆ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯಾ ಅವರು 2012ರ ಅಕ್ಟೋಬರ್‌ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿಯ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.

ಸೌಜನ್ಯ ಕೊಲೆ ಪ್ರಕರಣ| ಇಂದು(ಜೂ.16) ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು Read More »

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್| 15% ವೇತನ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರು ಈಗಾಗಲೇ ಎನ್ ಪಿಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ ಎನ್ನುವಂತೆ ಶೇ.15ರಷ್ಟು ವೇತನ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ವಿಧಾನಸೌಧದಲ್ಲಿ ನಡೆದಂತ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್| 15% ವೇತನ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು Read More »

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಪೊಲೀಸರಿಗೆ ಸರಿಯಾದ ಮಾಹಿತಿ ನೀಡದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಮೌಖಿಕ ಎಚ್ಚರಿಕೆಯನ್ನು ನೀಡಿದೆ. ಅರ್ಜಿಯ ವಿಚಾರಣಾ ಸಮಯದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆಯನ್ನು ನೀಡಿದೆ. ಫೇಸ್‌ಬುಕ್ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ಕಾರಣಕ್ಕೆ ಅರ್ಜಿ ವಿಚಾರಣೆ ವೇಳೆ ಮಂಗಳೂರು ಪೊಲೀಸರು ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದರು. ಪ್ರಕರಣದ ಕುರಿತು ಸರಿಯಾದ ಮಾಹಿತಿಯನ್ನು ಒಂದು ವಾರದಲ್ಲಿ ಒದಗಿಸುವಂತೆ ಹೈಕೋರ್ಟ್‌ ಕೇಂದ್ರ ಸರ್ಕಾರ

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್ Read More »

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು| ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ. ಇನ್ನೊಂದು ಮಹತ್ವದ ನಿರ್ಧಾರ ಎನ್ನುವಂತೆ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು| ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ Read More »

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಯಾವಾಗಿಂದ ಅರ್ಜಿ ಸ್ವೀಕಾರ| ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ಮಾಹಿತಿ ಹೀಗಿದೆ

ಸಮಗ್ರ ನ್ಯೂಸ್: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಯಾವಾಗಿಂದ ಅರ್ಜಿ ಸ್ವೀಕಾರ| ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ಮಾಹಿತಿ ಹೀಗಿದೆ Read More »

ಪೊಲೀಸರ ಮಹತ್ವದ ಕ್ರಮ| ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ನೀಡಬಹುದು!

ಸಮಗ್ರ ನ್ಯೂಸ್:ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು, ದಯಾನಂದ್, ‘ನಮ್ಮ 112 ಉನ್ನತೀಕರಿಸಲು ಮೊದಲ ಹೆಜ್ಜೆ ಇರಿಸಲಾಗಿದೆ. ನಾಗರಿಕರು ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಹಾಗೂ ಇತರೆ ಯಾವುದೇ ರೀತಿಯ ದೂರುಗಳು ಇದ್ದರೆ ಇನ್ನು ಮುಂದೆ 9480801000 ವಾಟ್ಸ್‌ಆಯಪ್ ನಂಬರ್‌ಗೆ ಕಳುಹಿಸಬಹುದು ಎಂದು ಹೇಳಿದ್ದಾರೆ. ನಮ್ಮ 112 ನಿಯಂತ್ರಣ

ಪೊಲೀಸರ ಮಹತ್ವದ ಕ್ರಮ| ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ನೀಡಬಹುದು! Read More »

ರಾಜ್ಯ ಸರ್ಕಾರದಿಂದ `APMC’ ಕಾಯ್ದೆ ಹಿಂಪಡೆಯಲು ನಿರ್ಧಾರ!

ಸಮಗ್ರ ನ್ಯೂಸ್ : ರಾಜ್ಯ ಸರ್ಕಾರವು ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆದು, ಈ ಹಿಂದೆ ಇದ್ದ ಹಳೇ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜು.3 ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಎಪಿಎಂಸಿ ಕಾಯ್ದೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಈಗಿನ ಕಾಯ್ದೆ ರದ್ದು ಮಾಡಿ, ಈ ಹಿಂದಿನ ಎಪಿಎಂಸಿ ಕಾಯ್ದೆಯನ್ನು ಮೂಲ ಸ್ವರೂಪದಲ್ಲಿ ಉಳಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು. ಹಿಂದಿನ ಬಿಜೆಪಿ ಸರ್ಕಾರವು ಎಪಿಎಂಸಿ ಕಾಯ್ದೆಯನ್ನು ಆತುರಾತುರದಲ್ಲಿ ಜಾರಿಗೆ

ರಾಜ್ಯ ಸರ್ಕಾರದಿಂದ `APMC’ ಕಾಯ್ದೆ ಹಿಂಪಡೆಯಲು ನಿರ್ಧಾರ! Read More »

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ಜೈಲಿನಲ್ಲಿರುವ ಭಾರತೀಯ ಪ್ರಜೆಯೊಬ್ಬರ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರೊಂದಿಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಸಾಮಾಜಿಕ ಮಾಧ್ಯಮದ ದೈತ್ಯ ಚಟುವಟಿಕೆಗಳನ್ನು ಮುಚ್ಚುವ ಆದೇಶವನ್ನು ಹೊರಡಿಸುವ ಬಗ್ಗೆ ಪರಿಗಣಿಸುವುದಾಗಿ ಕರ್ನಾಟಕ ಹೈಕೋರ್ಟ್ ಬುಧವಾರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬಿಕರ್ನಕಟ್ಟೆ ನಿವಾಸಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ. ‘ಅಗತ್ಯ ಮಾಹಿತಿಯೊಂದಿಗೆ ಸಂಪೂರ್ಣ ವರದಿಯನ್ನು

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ

ಸಮಗ್ರ ನ್ಯೂಸ್: ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ. ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಈ ಹಿಂದೆ ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ ಇದೀಗ ತಾಂತ್ರಿಕ ದೋಷದಿಂದಾಗಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 18 ಕ್ಕೆ ಮುಂದೂಡಿದೆ. ಜೂನ್ 18 ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ

ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ Read More »

ಅನ್ನ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಸಮಗ್ರ ನ್ಯೂಸ್: ಊಟ ಮಾಡುವಾಗ ಅನ್ನದ ತುತ್ತು ಗಂಟಲಲ್ಲಿ ಸಿಲುಕಿ 14 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಆಂಜನೇಯ ಎಂದು ಗುರುತಿಸಲಾಗಿದೆ. ತಾಯಿ ರುದ್ರಮ್ಮ ಬುದ್ಧಿಮಾಂದ್ಯ ಮಗನಿಗೆ ಊಟ ಬಡಿಸಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಅನ್ನದ ತುತ್ತು ಗಂಟಲಿಗೆ ಸಿಲುಕಿಕೊಂಡು ಆಂಜನೇಯ ಸಾವನ್ನಪ್ಪಿದ್ದಾನೆ.

ಅನ್ನ ಗಂಟಲಲ್ಲಿ ಸಿಲುಕಿ ಬಾಲಕ ಸಾವು Read More »