June 2023

ಉಡುಪಿ: ರಸ್ತೆಯಲ್ಲಿ ಚೆಲ್ಲಿದ ಡೀಸೆಲ್|ಇಪ್ಪತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನ ಸ್ಕಿಡ್!

ಸಮಗ್ರ ನ್ಯೂಸ್:ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಜೂನ್ 28ರಂದು ರಾತ್ರಿ ಸಂಭವಿಸಿದೆ. ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ವೊಂದರಿಂದ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ನಡೆದಿದೆ. ಸುಮಾರು 15 ರಿಂದ 20 ಹೆಚ್ಚಿನ ದ್ವಿಚಕ್ರ ವಾಹನಗಳು ಸ್ಕಿಡ್ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ […]

ಉಡುಪಿ: ರಸ್ತೆಯಲ್ಲಿ ಚೆಲ್ಲಿದ ಡೀಸೆಲ್|ಇಪ್ಪತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನ ಸ್ಕಿಡ್! Read More »

ಕೋಟಿ ಆಫರ್ ಬಂದರೂ ಕುರಿ ಮರಿ ಮಾರಾಟ ಮಾಡದ ಯಜಮಾನ!! ಅಷ್ಟಕ್ಕೂ ಆ ಕುರಿಯ ವಿಶೇಷತೆ ಏನಿತ್ತು?

ಸಮಗ್ರ ನ್ಯೂಸ್: ಒಂದು ಕೋಟಿ ರೂಪಾಯಿ ಕೊಡುತ್ತೇನೆ ಎಂದರೂ ಕುರಿಮರಿ ಮಾರಲು ಕುರಿಗಾಹಿಯೊಬ್ಬರು ನಿರಾಕರಿಸಿದ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದ್ದು, ಈ ಸುದ್ದಿ ಇದೀಗ ವೈರಲ್ ಆಗಿದೆ. ಬಕ್ರೀದ್ ಹಬ್ಬದ ಪ್ರಯುಕ್ತ ಕುರಿ ಖರೀದಿಸಲು ಹೋಗಿದ್ದ ಮುಸ್ಲಿಮ್ ಸಮುದಾಯದವರು ಕುರಿಮರಿಯ ಹೊಟ್ಟೆಯ ಮೇಲೆ 786 ಸಂಖ್ಯೆ ಕಂಡು ಅಚ್ಚರಿಪಟ್ಟಿದ್ದು, ಈ ಕುರಿಮರಿ ಖರೀದಿಸಲು ಮುಗಿಬಿದ್ದಿದ್ದಾರೆ. ಕುರಿಮರಿಯ ಹೊಟ್ಟೆಯ ಮೇಲೆ ಉರ್ದು ಭಾಷೆಯಲ್ಲಿ 786 ಸಂಖ್ಯೆ ಕಂಡು ಬಂದಿದೆ. ಆದರೆ ಕುರಿಮರಿಯ ಮಾಲೀಕ ರಾಜು ಸಿಂಗ್‌ ಗೆ

ಕೋಟಿ ಆಫರ್ ಬಂದರೂ ಕುರಿ ಮರಿ ಮಾರಾಟ ಮಾಡದ ಯಜಮಾನ!! ಅಷ್ಟಕ್ಕೂ ಆ ಕುರಿಯ ವಿಶೇಷತೆ ಏನಿತ್ತು? Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಕೋಶದ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜೂ. 24 ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೋಶದ ಉದ್ಘಾಟನೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಪದ ನಿಮಿತ್ತ ಕಾರ್ಯದರ್ಶಿಗಳಾದ ಡಾ.ನಿಂಗಯ್ಯ ಉದ್ಘಾಟಿಸಿದರು. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಔದ್ಯೋಗಿಕ ಕ್ಷೇತ್ರಕ್ಕೆ ಕಾಲಿಡಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಅನಿವಾರ್ಯ ವಾಗಿದೆ .ಶಿಕ್ಷಣದ ಜೊತೆ ಜೊತೆಗೆ ಗ್ರಾಮೀಣಪ್ರದೇಶದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯಗಳು ಕಾಲೇಜಿನಲ್ಲಿ ನಿರಂತರವಾಗಿ ನಡೆಯಲಿ ಮತ್ತು ವಿದ್ಯಾರ್ಥಿಗಳು ಉನ್ನತ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಕೋಶದ ಉದ್ಘಾಟನೆ Read More »

ಕೊಡಗು: ವಾಹನ ಕಳವು ಪ್ರಕರಣ ಆರೋಪಿ ಬಂಧನ

ಸಮಗ್ರ ನ್ಯೂಸ್: ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಶನಿವಾರಸಂತೆ ಮತ್ತು ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ತನಿಖೆಯನ್ನು ಕೈಗೊಂಡ ಪೊಲೀಸರು ದಿನಾಂಕ 25-06-2023 ರಂದು ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಆರೋಪಿ ಮಂಜುನಾಥ್ ಎಂಬಾತನನ್ನು ದಸ್ತಗಿರಿ ಮಾಡಿ ಆತನಿಂದ 7

ಕೊಡಗು: ವಾಹನ ಕಳವು ಪ್ರಕರಣ ಆರೋಪಿ ಬಂಧನ Read More »

ರಿಷಬ್‌ ಶೆಟ್ಟಿಗೆ ಅಮೇರಿಕದಲ್ಲಿ “ವಿಶ್ವ ಕನ್ನಡಿಗ 2023” ಪ್ರಶಸ್ತಿ ಪ್ರಧಾನ | ಪಂಚೆ‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ ಇಂಟರ್ ನ್ಯಾಷನಲ್ ಸ್ಟಾರ್..!

ಸಮಗ್ರ ನ್ಯೂಸ್: ಕಾಂತಾರ ಸಿನಿಮಾದ ಬಳಿಕ ಇಂಟರ್ ನ್ಯಾಶನಲ್ ಸ್ಟಾರ್ ಎಂದೇ ಪ್ರಸಿದ್ಧರಾದ ರಿಷಬ್ ಶೆಟ್ಟಿ (RIshab Shetty) ಇದೀಗ ಅಮೆರಿಕ ರಾಜಧಾನಿ ವಾಷಿಂಗ್ಟನ್‌ ನಗರದ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ (Paramount Theatre) ನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಿಷಬ್ ಜೊತೆ ಪತ್ನಿ ಪ್ರಗತಿ ಶೆಟ್ಟಿ ಈ ಸುಸಂದರ್ಭದಲ್ಲಿ ಜೊತೆಯಾಗಿದ್ದು, ರಿಷಬ್ ಪಂಚೆ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ್ದು ಅಲ್ಲಿನ ಜನರ

ರಿಷಬ್‌ ಶೆಟ್ಟಿಗೆ ಅಮೇರಿಕದಲ್ಲಿ “ವಿಶ್ವ ಕನ್ನಡಿಗ 2023” ಪ್ರಶಸ್ತಿ ಪ್ರಧಾನ | ಪಂಚೆ‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ ಇಂಟರ್ ನ್ಯಾಷನಲ್ ಸ್ಟಾರ್..! Read More »

ಆಧಾರ್ – ಪಾನ್ ಲಿಂಕ್ ಮಾಡಲು ನಾಳೆಯೇ ಕೊನೆದಿನ| ಜೋಡಣೆಯಾಗದಿದ್ರೆ ವೇಸ್ಟಾಗುತ್ತೆ ಪಾನ್ ಕಾರ್ಡ್

ಸಮಗ್ರ ನ್ಯೂಸ್: ಆಧಾರ್ -ಪಾನ್ ಕಾರ್ಡ್ ಜೋಡಣೆಗೆ ನಾಳೆ(ಜೂ.30) ಕೊನೆಯ ದಿನವಾಗಿದ್ದು, ಆಧಾರ್ ಜೋಡಣೆ ಮಾಡದಿದ್ದರೆ ಪಾನ್ ಕಾರ್ಡ್ ಅಮಾನ್ಯವಾಗಲಿದೆ. ಬ್ಯಾಂಕ್, ಆರ್ಥಿಕ ಚಟುವಟಿಕೆಗಳಿಗೆ ಪಾನ್ ಕಾರ್ಡ್ -ಆಧಾರ್ ಕಾರ್ಡ್ ಜೋಡಣೆ ಕಡ್ಡಾಯವಾಗಿದ್ದು, ಬ್ಯಾಂಕ್ ಖಾತೆ ತೆರೆಯಲು, ನಿಗದಿತ ಠೇವಣಿಗಳಲ್ಲಿ ಹೂಡಿಕೆ ಮಾಡಲು, ಡಿಮ್ಯಾಟ್ ಅಕೌಂಟ್ ತೆರೆಯಲು ಪಾನ್ ಕಾರ್ಡ್ ಸಂಖ್ಯೆ ಕಡ್ಡಾಯವಾಗಿದೆ. ನಾಳೆಯೊಳಗೆ ಆಧಾರ್ ಜೋಡಣೆ ಮಾಡಿಸದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ಹೇಳಲಾಗಿದ್ದು, ಜೋಡಣೆ ಮಾಡದವರು ಲಿಂಕ್ ಮಾಡಿಸಿಕೊಳ್ಳುವುದು ಒಳಿತು.

ಆಧಾರ್ – ಪಾನ್ ಲಿಂಕ್ ಮಾಡಲು ನಾಳೆಯೇ ಕೊನೆದಿನ| ಜೋಡಣೆಯಾಗದಿದ್ರೆ ವೇಸ್ಟಾಗುತ್ತೆ ಪಾನ್ ಕಾರ್ಡ್ Read More »

ಮಂಗಳೂರು: ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಬಾಲಕರಿಬ್ಬರು ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ ಮೃತಪಟ್ಟಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಬಾಲಕರಿಬ್ಬರು ಸಾವು Read More »

ಎಕ್ಸ್‌ಪ್ರೆಸ್ ಹೈವೇನಲ್ಲಿ ಮತ್ತೊಂದು ಅಪಘಾತ| ಬೊಲೆರೋ ಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಎಲೆಕ್ಟ್ರಿಕ್ ಬಸ್| ಬಸ್ ಕಂಡಕ್ಟರ್ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಬುಧವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್‌ಆರ್ ಟಿಸಿ ಎಲೆಕ್ಟ್ರಿಕ್ ಬಸ್ ಢಿಕ್ಕಿಯಾದ ಪರಿಣಾಮ ಬಸ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಿಗೊಳಗಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು, ಈ ವೇಳೆ ಫ್ಲೈವುಡ್ ತುಂಬಿದ್ದ

ಎಕ್ಸ್‌ಪ್ರೆಸ್ ಹೈವೇನಲ್ಲಿ ಮತ್ತೊಂದು ಅಪಘಾತ| ಬೊಲೆರೋ ಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಎಲೆಕ್ಟ್ರಿಕ್ ಬಸ್| ಬಸ್ ಕಂಡಕ್ಟರ್ ಸ್ಥಳದಲ್ಲೇ ಸಾವು Read More »

Weather report: ಕರಾವಳಿಯ ಮೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್| ರಾಜ್ಯದಲ್ಲಿ ಉತ್ತಮ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದ.ಕ, ಉಡುಪಿ, ಉ.ಕನ್ನಡ ಜಿಲ್ಲೆಗಳಿಗೆ ಗುರುವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆಯಿದೆ. ಕರಾವಳಿಯಲ್ಲಿ 40-45 ಕಿ.ಮೀ.ಯಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹೇಳಿದೆ. ಬೆಂಗಳೂರಿನಲ್ಲಿ ಮೋಡ ಕವಿದ

Weather report: ಕರಾವಳಿಯ ಮೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್| ರಾಜ್ಯದಲ್ಲಿ ಉತ್ತಮ ಮಳೆ‌ ಮುನ್ಸೂಚನೆ Read More »

ಕೇರಳದಲ್ಲಿ ‘ನಂದಿನಿ’ ಬ್ರ್ಯಾಂಡ್ ವಿಸ್ತರಣೆ ಕೈಬಿಟ್ಟ ಕರ್ನಾಟಕ

ಸಮಗ್ರ ನ್ಯೂಸ್: ಕೇರಳದಲ್ಲಿ ತನ್ನ ಕೆಲವು ಮಾರಾಟ ಮಳಿಗೆಗಳನ್ನು ತೆರೆದಿರುವ ಜನಪ್ರಿಯ ಕರ್ನಾಟಕದ ಡೈರಿ ಬ್ರ್ಯಾಂಡ್ ನಂದಿನಿ, ರಾಜ್ಯದಲ್ಲಿ ತನ್ನ ವಿಸ್ತರಣೆ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಕೇರಳದ ಪಶುಸಂಗೋಪನೆ, ಡೈರಿ ಅಭಿವೃದ್ಧಿ ಮತ್ತು ಹಾಲು ಸಹಕಾರಿಗಳ ಸಚಿವ ಜೆ ಚಿಂಚುರಾಣಿ ಅವರು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಸಿಇಒ ಅವರಿಂದ ನಂದಿನಿ ಎಂಬ ವ್ಯಾಪಾರ ಹೆಸರನ್ನು ಬಳಸುವುದರಿಂದ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಹೇಳಿದರು. ಕೆಎಂಎಫ್ ನಿರ್ಧಾರವನ್ನು ಸ್ವಾಗತಿಸಿದ ಚಿಂಚುರಾಣಿ, ರಾಜ್ಯದಲ್ಲಿ ಸದ್ಯಕ್ಕೆ ನಂದಿನಿ ಹೊಸ

ಕೇರಳದಲ್ಲಿ ‘ನಂದಿನಿ’ ಬ್ರ್ಯಾಂಡ್ ವಿಸ್ತರಣೆ ಕೈಬಿಟ್ಟ ಕರ್ನಾಟಕ Read More »