June 2023

ನಿಂತಿದ್ದ ಲಾರಿಗೆ ಅಂಬ್ಯುಲೆನ್ಸ್ ಡಿಕ್ಕಿ; ಚಾಲಕ ಸೇರಿ ಮೂವರು ಸ್ಪಾಟ್ ಡೆತ್

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ, ಆ್ಯಂಬುಲೆನ್ಸ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಆಯಂಬುಲೆನ್ಸ್ ನಲ್ಲಿದ್ದ ಕನಕಮಣಿ (72) ಆಕಾಶ್ (17 ಮತ್ತು ಚಾಲಕ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಜರಾತ್ ನಿಂದ ತಮಿಳುನಾಡಿಗೆ ಹೋಗುತ್ತಿದ್ದ ಆಯಂಬುಲೆನ್ಸ್ ಚಿತ್ರದುರ್ಗದ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ನಿಂತಿದ್ದ ಲಾರಿಗೆ ಅಂಬ್ಯುಲೆನ್ಸ್ ಡಿಕ್ಕಿ; ಚಾಲಕ ಸೇರಿ ಮೂವರು ಸ್ಪಾಟ್ ಡೆತ್ Read More »

ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. 11 ಐಎಎಸ್ ಅಧಿಕಾರಿಗಳ ವರ್ಗಾವಣೆ:ಎರಡು

ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ತೀವ್ರ ಸ್ವರೂಪ ಪಡೆದುಕೊಂಡ ‘ಬಿಫರ್ ಜಾಯ್’ ಚಂಡಮಾರುತ| ಕರಾವಳಿ ಪ್ರಕ್ಷುಬ್ದ; ಭಾರೀ ಗಾಳಿ ಮಳೆ ಸಾಧ್ಯತೆ| ಮುಂಗಾರು ಮಳೆಯಲ್ಲಿ ಉಂಟಾಗಲಿದೆ ವ್ಯತ್ಯಯ

ಸಮಗ್ರ ನ್ಯೂಸ್: ರಾಜ್ಯದ ಪಶ್ಚಿಮ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸೋಮವಾರ ಉಂಟಾದ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಎದ್ದಿರುವ ಈ ಚಂಡಮಾರುತ ‘ಬಿಪೋರ್‌ಜಾಯ್’ ತೀವ್ರಗೊಂಡು ಉತ್ತರ ದಿಕ್ಕಿನತ್ತ ಗಂಟೆಗೆ 5ಕಿ.ಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಚಂಡಮಾರುತವು ಗೋವಾದಿಂದ ನೈಋತ್ಯದಲ್ಲಿ 880ಕಿ.ಮೀ. ದೂರದಲ್ಲಿ, ಮುಂಬಯಿಯಿಂದ ನೈಋತ್ಯ ದಿಕ್ಕಿನಲ್ಲಿ 990 ಕಿ.ಮೀ., ಪೋರ್‌ಬಂದರಿನಿಂದ 1060 ಹಾಗೂ ಕರಾಚಿಯಿಂದ 1360ಕಿ.ಮೀ ದೂರದಲ್ಲಿ ಕೇಂದ್ರೀಕೃತಗೊಂಡಿತ್ತು ಎಂದು ವರದಿ ತಿಳಿಸಿದೆ. ಮುಂದಿನ 12

ತೀವ್ರ ಸ್ವರೂಪ ಪಡೆದುಕೊಂಡ ‘ಬಿಫರ್ ಜಾಯ್’ ಚಂಡಮಾರುತ| ಕರಾವಳಿ ಪ್ರಕ್ಷುಬ್ದ; ಭಾರೀ ಗಾಳಿ ಮಳೆ ಸಾಧ್ಯತೆ| ಮುಂಗಾರು ಮಳೆಯಲ್ಲಿ ಉಂಟಾಗಲಿದೆ ವ್ಯತ್ಯಯ Read More »

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್| ಡಿನೋಟಿಫಿಕೇಶನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದ್ದು ಈ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ. 2015ರಲ್ಲಿ ಅಕ್ರಮ ಡಿನೋಟಿಫಿಕೇಶನ್ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 19 ಡಿಸೆಂಬರ್​ 2015ರ ಕೇಸ್​ನ್ನು ಹೈಕೋರ್ಟ್ ರದ್ದುಪಡಿಸಿದೆ. 2006-07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿನ ವಿರುದ್ಧವಾಗಿ ಬೆಳ್ಳಂದೂರು ಮತ್ತು

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್| ಡಿನೋಟಿಫಿಕೇಶನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ Read More »

ಕಾಣಿಯೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಗೊನೆ ಮುಹೂರ್ತ

ಸಮಗ್ರ ನ್ಯೂಸ್: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಜೂ 11ರಿಂದ ಜೂ 13ರವರೆಗೆ ನಡೆಯಲಿರುವ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಗೊನೆ ಮೂಹೂರ್ತವು ಜೂ 5ರಂದು ಬೆಳಗ್ಗೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರರು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

ಕಾಣಿಯೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಗೊನೆ ಮುಹೂರ್ತ Read More »

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ 11ರಿಂದ ಜೂ 13ರವರೆ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪುಣ್ಚತ್ತಾರು ಕ್ಷೇತ್ರದಲ್ಲಿ ಜೂ 4ರಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ ಆಚಾರ್ಯ ಕರಿಮಜಲು, ಮೊಕ್ತೇಸರ ಜನಾರ್ದನ ಆಚಾರ್ಯ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ Read More »

ಮಂಗಳೂರು: ದೇಶದಲ್ಲೇ ಮೊದಲ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ʼಹೃದಯ ವೈಶಾಲ್ಯ ಯೋಜನೆʼ ಜಾರಿ

ಸಮಗ್ರ ನ್ಯೂಸ್: ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಸಣಾ ಶಿಬಿರ ಹೃದಯ ವೈಶಾಲ್ಯ ಯೋಜನೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಪ್ರಕಟಿಸಿದರು. ಅವರು ಜೂ.7ರ ಬುಧವಾರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್‍ಸ್ಟೆಪ್ ಫೌಂಡೇಶನ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ.

ಮಂಗಳೂರು: ದೇಶದಲ್ಲೇ ಮೊದಲ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ʼಹೃದಯ ವೈಶಾಲ್ಯ ಯೋಜನೆʼ ಜಾರಿ Read More »

ಮಂಗಳೂರು: ವಾಯುಭಾರ ಕುಸಿತದಿಂದಾಗಿ ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ

ಮಂಗಳೂರು: ವಾಯುಭಾರ ಕುಸಿತದಿಂದಾಗಿ ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ Read More »

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ! ಮೀನುಗಾರರಿಗೆ ಮುನ್ನೆಚ್ಚರಿಕೆ

ಸಮಗ್ರನ್ಯೂಸ್: ಹವಾಮಾನ ಮುನ್ಸೂಚನೆಯಂತೆ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿರುತ್ತದೆ. ಈ ಸಂದರ್ಭದಲ್ಲಿ ಸಂಭವಿಸುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ! ಮೀನುಗಾರರಿಗೆ ಮುನ್ನೆಚ್ಚರಿಕೆ Read More »

`ವಿದ್ಯುತ್ ಬಿಲ್ ಕಟ್ಟುವ ವಿಚಾರದಲ್ಲಿ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಒಂದು ನ್ಯಾಯ’| ಶಿಶಿಲ ಗ್ರಾಮಸಭೆಯಲ್ಲಿ ಆಕ್ರೋಶ

ಸಮಗ್ರ ನ್ಯೂಸ್: ವಿದ್ಯುತ್ ಬಿಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಬಡವರಿಗೆ ಒಂದು ನ್ಯಾಯ ಶ್ರೀಮಂತರಿಗೆ ಒಂದು ನ್ಯಾಯ ಎಂಬಂತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮಸಭೆಯಲ್ಲಿ ನಡೆದಿದೆ. ಶಿಶಿಲ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜೂ.7ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷ ಸಂದೀಪ್ ಎ. ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಭಾಗವಹಿಸಿದ್ದರು. ಸಭೆಯ

`ವಿದ್ಯುತ್ ಬಿಲ್ ಕಟ್ಟುವ ವಿಚಾರದಲ್ಲಿ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಒಂದು ನ್ಯಾಯ’| ಶಿಶಿಲ ಗ್ರಾಮಸಭೆಯಲ್ಲಿ ಆಕ್ರೋಶ Read More »