June 2023

ಮಂಗಳೂರು: ಮುಂಗಾರು ವಿಳಂಬ ಹಿನ್ನೆಲೆ| ಕೆಲವೆಡೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಬವಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನೆ, ಕಚೇರಿ, ಶಾಲಾ-ಕಾಲೇಜುಗಳಲ್ಲಿ ನೀರಿನ ಕೊರತೆ ಉಂಟಾಗಿ ತೊಂದರೆಯಾಗಿದೆ. ಇನ್ನು ಈಗಷ್ಟೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು ನೀರಿನ ಕೊರತೆಯಿಂದ ಮಕ್ಕಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ನೀರಿನ ಸಮಸ್ಯೆ ಉದ್ಭವವಾದುದರಿಂದ ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ರಜೆ ಘೋಷಣೆ ಮಾಡಿವೆ. ಇನ್ನು ಕೆಲವೆಡೆ ಶಿಕ್ಷಣ ಸಂಸ್ಥೆಗಳು ಅರ್ಧ ದಿನ ತರಗತಿ ನಡೆಸುತ್ತಿವೆ. ಕಾಲೇಜು ವಿದ್ಯರ್ಥಿಗಳಿಗೆ ಆನ್​ ಲೈನ್​ ಮೂಲಕ […]

ಮಂಗಳೂರು: ಮುಂಗಾರು ವಿಳಂಬ ಹಿನ್ನೆಲೆ| ಕೆಲವೆಡೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಹುಲಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಹುಲಿಯೊಂದು ಇಂದು ಹೃದಯಾಘಾತವಾಗಿ ಸಾವನ್ನಪ್ಪಿದೆ. ಇತ್ತೀಚೆಗೆ ಎರಡು ಹುಲಿಗಳ ನಡುವೆ ಭೀಕರ ಕಾಳಗ ನಡೆದು ಗಾಯಗೊಂಡಿದ್ದ ಒಂದು ಹುಲಿಗೆ ಹೃದಯಾಘಾತವಾಗಿದೆ. ಗಾಯಗೊಂಡಿದ್ದ ಈ ಹುಲಿ ಚೇತರಿಸಿತ್ತು. ಆದರೆ ಬುಧವಾರ ಹೃದಯಾಘಾತದಿಂದ ಸಾವನ್ನಪ್ಪಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಹುಲಿ ಹೃದಯಾಘಾತದಿಂದ ಸಾವು Read More »

ಮಂಗಳೂರು: ಸಾಹಿತ್ಯ ಪುಸ್ತಕಗಳ ಕೊಡುಗೆ- ಜೂ.12ರೊಳಗೆ ನೋಂದಾಯಿಸಲು ಕರೆ

ಸಮಗ್ರನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬಿ.ಆರ್. ನರಸಿಂಹ ರಾವ್ ಉಡುಪಿ ಅವರು ಮಂಗಳೂರು ತಾಲೂಕಿನ ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಾಚನಾಲಯಕ್ಕೆ ಸಾಹಿತ್ಯಿಕ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಿದ್ದಾರೆ. ಈ ಕೊಡುಗೆಯನ್ನು ಪಡೆಯಲು ಶಾಲೆಗಳ ಮುಖ್ಯಸ್ಥರು ಇದೇ ಜೂ.12ರೊಳಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಅರುಣಾ ನಾಗರಾಜ್ ಮೊಬೈಲ್ ಸಂಖ್ಯೆ: 9141716602 ಅಥವಾ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಸಹ ಕಾರ್ಯದರ್ಶಿ

ಮಂಗಳೂರು: ಸಾಹಿತ್ಯ ಪುಸ್ತಕಗಳ ಕೊಡುಗೆ- ಜೂ.12ರೊಳಗೆ ನೋಂದಾಯಿಸಲು ಕರೆ Read More »

ಮಂಗಳೂರು: ಪ್ರಾದೇಶಿಕ ಕಚೇರಿ ಸ್ಥಳಾಂತರ

ಸಮಗ್ರನ್ಯೂಸ್: ಉರ್ವಾ ಸ್ಟೋರ್‌ನ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಟ್ಟಡದ ಮೂರನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪ್ರಾದೇಶಿಕ ಕಚೇರಿ ಜೂ.5ರಿಂದ ಅದೇ ಕಟ್ಟಡದ ಎರಡನೇ ಮಹಡಿಗೆ ಸ್ಥಳಾಂತರಗೊಂಡಿದೆ ಎಂದು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಪ್ರಾದೇಶಿಕ ಕಚೇರಿ ಸ್ಥಳಾಂತರ Read More »

ಶೀಲಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ

ಸಮಗ್ರ ನ್ಯೂಸ್: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ದ್ರಾಕ್ಷಣವ್ವ ಎಂಬವರನ್ನು ಪತಿ ಪ್ರಭು ವಾರತಿ (52) ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವರದಿಯಾಗಿದೆ. ಪತ್ನಿ ಶೀಲ ಶಂಕಿಸಿ ನಿತ್ಯ ಗಲಾಟೆ ಮಾಡುತ್ತಿದ್ದ ಪ್ರಭು ನಿನ್ನೆಯೂ ಗಲಾಟೆ ಮಾಡಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ಮನೆ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೀಲಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ Read More »

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್| ಸದ್ದಿಲ್ಲದೆ ಹೆಚ್ಚಳವಾಯ್ತು ಮದ್ಯದ ದರ!?

ಸಮಗ್ರ ನ್ಯೂಸ್: ಕೆಲವು ಉಚಿತಗಳನ್ನು ನೀಡಿ ಹಲವು ಸರಕುಗಳಿಗೆ ಬೆಲೆ ಏರಿಸಲಾಗಿದೆ ಎಂಬ ಆರೋಪದ ನಡುವೆಯೇ ಸದ್ದಿಲ್ಲದೆ ಮದ್ಯದ ದರಗಳನ್ನು ಕೂಡ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. ಮದ್ಯಪ್ರಿಯರಿಗೆ ಶಾಕ್ ಎನ್ನುವಂತೆ ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಮಾಹಿತಿಯ ಪ್ರಕಾರ ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನವೇ ಎಣ್ಣೆ ದರವನ್ನು ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ‌

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್| ಸದ್ದಿಲ್ಲದೆ ಹೆಚ್ಚಳವಾಯ್ತು ಮದ್ಯದ ದರ!? Read More »

ಚಂಡಮಾರುತವಾಗಿ ರೂಪುಗೊಂಡ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿಗೆ ಹೈ ಅಲರ್ಟ್

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ಕಳೆದ ಕೆಲ ದಿನಗಳಿಂದ ಕುಸಿತಗೊಂಡಿರುವ ವಾಯುಭಾರವು ಸದ್ಯ ಚಂಡಮಾರುತವಾಗಿ ರೂಪುಗೊಂಡಿದೆ. ಮುಂದಿನ 24 ಗಂಟೆಗಳ ಕಾಲ ಇದೇ ರೀತಿಯಲ್ಲಿ ಹವಾಮಾನ ಮುಂದುವರಿದರೆ ಕರಾವಳಿಗೆ ಬಿಪೋರ್ಜಾಯ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತದಿಂದ ಮುಂಗಾರು ಮಳೆ ರಾಜ್ಯಕ್ಕೆ ಆಗಮಿಸುವುದು ಮತ್ತಷ್ಟು ವಿಳಂಬವಾಗಲಿದೆ. ಮುಂದಿನ 24 ಗಂಟೆಯಲ್ಲಿ ಚಂಡಮಾರುತ ಅಪ್ಪಳಿಸಲಿದ್ದು, ಇದರಿಂದ ದಕ್ಷಿಣ ಭಾರತದ ಪಶ್ಚಿಮ ತೀರಗಳು ಅಪಾಯವನ್ನು ಎದುರಿಸಲಿವೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಪ್ರಸ್ತುತ ಉತ್ತರದತ್ತ ಮುಖ ಮಾಡಿರುವ ಚಂಡಮಾರುತದಿಂದ ನಾಳೆಯಿಂದ

ಚಂಡಮಾರುತವಾಗಿ ರೂಪುಗೊಂಡ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿಗೆ ಹೈ ಅಲರ್ಟ್ Read More »

‘ಬೇರ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗ ನಟ ಅಶ್ವಿನ್ ಹಾಸನ್

Samagra news: ಅಶ್ವಿನ್ ಹಾಸನ್ ಕನ್ನಡ ಚಿತ್ರರಂಗ,ಕಿರುತೆರೆ ಮತ್ತು ರಂಗಭೂಮಿಯಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಐಟಿ ಉದ್ಯೋಗಿಯಾಗಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು 2014 ರಲ್ಲಿ ಉದ್ಯೋಗ ತೊರೆದು ಪೂರ್ಣ ಪ್ರಮಾಣದ ನಟನೆಗೆ ಇಳಿದರು. ಹಾಸನದ ಹಳ್ಳಿಯೊಂದರಲ್ಲಿ ಹುಟ್ಟಿ, ವೃತ್ತಿಯಲ್ಲಿ ಇಂಜಿನಿಯರ್ ಆಗಿ ಪ್ರವೃತ್ತಿಯಲ್ಲಿ ನಟನೆಯನ್ನು ಮೆಚ್ಚಿ ಇಂದು ಫುಲ್ ಟೈಮ್ ಕಲಾವಿದನಾಗಿ ಅಭಿನಯದ ಮೂಲಕ ಸೈ ಎನಿಸಿಕೊಂಡ ಅಪ್ಪಟ ಕನ್ನಡಿಗ ಅಶ್ವಿನ್ ಹಾಸನ್. 2005 ರಿಂದ ಡಾ. ಬಿ.ವಿ.ರಾಜಾರಾಮ್ ನೇತೃತ್ವದ `ಕಲಾಗಂಗೋತ್ರಿ’ ತಂಡದಲ್ಲಿ

‘ಬೇರ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗ ನಟ ಅಶ್ವಿನ್ ಹಾಸನ್ Read More »

ಜೂ.30: ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪ ಚುನಾವಣೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಪರಿಷತ್ ಸದಸ್ಯರ‌ ತೆರವಾಗುವ ಮೂರು ಸ್ಥಾನಗಳಿಗೆ ಉಪ ಚುನಾವಣೆಯು ಜೂನ್ 30 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಜೂನ್‌ನಲ್ಲಿ ಮೂವರು ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುವ ಕಾರಣ ಉಪಚುನಾವಣೆ ಅನಿವಾರ್ಯವಾಗಿತ್ತು. ಶಾಸಕರಾದ ಸವದಿ ಲಕ್ಷ್ಮಣ್ ಮತ್ತು ಬಾಬುರಾವ್ ಚಿಂಚನಸೂರ್ ಅವರ ಅವಧಿ ಕ್ರಮವಾಗಿ ಜೂನ್ 14 ಮತ್ತು ಜೂನ್ 17 ರಂದು ಕೊನೆಗೊಂಡರೆ, ಆರ್. ಶಂಕರ್ ಅವರ ಅವಧಿ ಜೂನ್ 30 ರಂದು ಕೊನೆಗೊಳ್ಳಲಿದೆ. ಉಪಚುನಾವಣೆಯ ವೇಳಾಪಟ್ಟಿ

ಜೂ.30: ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪ ಚುನಾವಣೆ Read More »

ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ₹30 ಕೋಟಿ ನೀಡಿದ್ರಾ ವಿರಾಟ್ ಕೊಹ್ಲಿ? ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮೆಸೇಜ್ ನ ಅಸಲಿಯತ್ತೇನು?

ಸಮಗ್ರ ನ್ಯೂಸ್: ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ಟೀಮ್​ ಇಂಡಿಯಾದ ಮಾಜಿ ನಾಯಕ ವಿರಾಟ್​ ಕೊಹ್ಲಿ ಅವರು 30 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಷ್ಟೇ ಅಲ್ಲದೆ, ಅನೇಕ ಮೊಬೈಲ್​ ವಾಟ್ಸ್​ಆಯಪ್​​ ಸ್ಟೇಟಸ್​ಗಳಲ್ಲಿ ಮೋದಿ ಅವರನ್ನು ಕೊಂಡಾಡುತ್ತಿದ್ದಾರೆ. ಆದರೆ, ಈ ಸುದ್ದಿ ಸುಳ್ಳು ಎಂದು ಫ್ರೀ ಪ್ರೆಸ್​ ಜರ್ನಲ್​ ವರದಿ ಮಾಡಿದೆ. ಕೊಹ್ಲಿ ಯಾವುದೇ ನೆರವು ಘೋಷಣೆ ಮಾಡಿಲ್ಲ. ಬದಲಾಗಿ ಅವರು ರೈಲು ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೊಹ್ಲಿ

ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ₹30 ಕೋಟಿ ನೀಡಿದ್ರಾ ವಿರಾಟ್ ಕೊಹ್ಲಿ? ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮೆಸೇಜ್ ನ ಅಸಲಿಯತ್ತೇನು? Read More »