June 2023

‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಈ ವಾರ ಕನಕಪುರ ಬಂಡೆ ಡಿ.ಕೆ ಶಿವಕುಮಾರ್| ಕುತೂಹಲ ಮೂಡಿಸಿದ ಪ್ರೋಮೋ

ಸಮಗ್ರ ನ್ಯೂಸ್: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಈ ವಾರ ಉಪಮುಖ್ಯಮಂತ್ರಿ, ಕಾಂಗ್ರೆಸ್ ನ ಪ್ರಮುಖ ನಾಯಕ ಡಿಕೆ ಶಿವಕುಮಾರ್ ಅತಿಥಿಯಾಗಿದ್ದಾರೆ. ಇದರೊಂದಿಗೆ ಈ ಕಾರ್ಯಕ್ರಮದ ಸೀಸನ್ ಕೊನೆಯಾಗಲಿದೆ. ಈ ಬಗ್ಗೆ ಈಗ ವಾಹಿನಿಯೇ ಅಧಿಕೃತವಾಗಿ ಪ್ರೋಮೋ ಹರಿಯಬಿಟ್ಟಿದೆ. ಡಿಕೆಶಿ ಕಳೆದ ವಾರವೇ ಶೋನಲ್ಲಿ ಕಾಣಿಸಿಕೊಳ್ಳಬೇಕಾಗಿತ್ತು. ಆದರೆ ಪೂರ್ವನಿರ್ಧರಿತ ಕಾರ್ಯಕ್ರಮಗಳಿಂದಾಗಿ ಚಿತ್ರೀಕರಣ ಸಾಧ‍್ಯವಾಗಿರಲಿಲ್ಲ. ಹೀಗಾಗಿ ಕಳೆದ ವಾರ ಶೋ ರದ್ದಾಗಿತ್ತು. ಆದರೆ ಈಗ ಡಿಕೆಶಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಇದೇ ವಾರದ ಅಂತ್ಯಕ್ಕೆ […]

‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಈ ವಾರ ಕನಕಪುರ ಬಂಡೆ ಡಿ.ಕೆ ಶಿವಕುಮಾರ್| ಕುತೂಹಲ ಮೂಡಿಸಿದ ಪ್ರೋಮೋ Read More »

ಸ್ಲೀಪರ್ ಕೋಚ್ ಬಸ್‍ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು

ಸಮಗ್ರ ನ್ಯೂಸ್: ಸ್ಲೀಪರ್ ಕೋಚ್ ಬಸ್ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ ರಾಮಕೃಷ್ಣಪ್ಪ (20) ಮೃತಪಟ್ಟ ಯುವತಿ. ಆದರೆ ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಘಟನೆ ವಿವರ: ಬಿ.ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ದ ಬೆಂಗಳೂರು ಮೂಲದ ಹೇಮಾಳಿಗೆ ಬಾಗಲಕೋಟೆ ಮೂಲದ ಅಖಿಲ್ ಜೊತೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ

ಸ್ಲೀಪರ್ ಕೋಚ್ ಬಸ್‍ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು Read More »

ಬೆಂಗಳೂರು: ಪ್ರವಾಸಿ ತಾಣಗಳ ಮಾಹಿತಿ ಪಡೆದು ಮನೆ ಬಿಟ್ಟ ಯುವಕ|ಕರಾವಳಿ ಭಾಗದಲ್ಲಿ ಮಗನಿಗಾಗಿ ಪೋಷಕರ ಹುಡುಕಾಟ

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕ ನ್ಯೂ ಟೌನ್ ನ್ಯಾಶನಲ್ ಪಬ್ಲಿಕ್ ನ 9ನೇ ತರಗತಿ ಓದುತ್ತಿದ್ದ ಆದಿತ್ಯಾ ಎಂಬ ಬಾತಾಯಕೆಲಮದಿನಗಳಿಂದ ನಾಪತ್ತೆಯಾಗಿದ್ದು ಇದೀಗ ಆತನ ಮನೆಯವ್ರು ಹುಡುಕುತ್ತಾ ಕರಾವಳಿಯ ಮಲ್ಪೆಗೆ ಬಂದಿದ್ದಾರೆ. ತನ್ನ ತಾಯಿಯ ಮೊಬೈಲ್​ನಲ್ಲಿ ಕೆಲವು ಪ್ರವಾಸಿ ತಾಣಗಳ ಬಗ್ಗೆ ಸರ್ಚ್ ಮಾಡಿ ಮಾಹಿತಿ ಸಂಗ್ರಹಿಸಿ ಬ್ಯಾಗ್​ನಲ್ಲಿ ಬಟ್ಟೆ ತುಂಬಿಕೊಂಡು ಮನೆ ಬಿಟ್ಟಿದ್ದು ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದಿತ್ಯಾ ಅಮ್ಮನ ಫೋನ್​ನಲ್ಲಿ ಮಂಗಳೂರು, ಮಲ್ಪೆ, ಮೈಸೂರಿನ ಕೆಲ ಭಾಗಗಳ ಬಗ್ಗೆ ಸರ್ಚ್ ಮಾಡಿ

ಬೆಂಗಳೂರು: ಪ್ರವಾಸಿ ತಾಣಗಳ ಮಾಹಿತಿ ಪಡೆದು ಮನೆ ಬಿಟ್ಟ ಯುವಕ|ಕರಾವಳಿ ಭಾಗದಲ್ಲಿ ಮಗನಿಗಾಗಿ ಪೋಷಕರ ಹುಡುಕಾಟ Read More »

ಚಿಕ್ಕಮಗಳೂರು : ಮಹಿಳೆ ಮೇಲೆ ಹುಲಿ ದಾಳಿ

ಸಮಗ್ರ ನ್ಯೂಸ್: ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿಯ ನಡೆದಿದೆ. ಅಸ್ಸಾಂ ಮೂಲದ ಕಾರ್ಗಂಭೀರವಾಗಿಯಾಗಿದ್ದು ಹುಲಿ ದಾಳಿಯಿಂದ ಹಣೆ ಮತ್ತು ಮುಖಕ್ಕೆ ಗಂಭೀರವಾಗಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ 8 ವರ್ಷದ ಹಿಂದೆ ಪಂಡರವಳ್ಳಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದರು ಇದೀಗ ಮತ್ತೆ ಹುಲಿ ದಾಳಿಯಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ.

ಚಿಕ್ಕಮಗಳೂರು : ಮಹಿಳೆ ಮೇಲೆ ಹುಲಿ ದಾಳಿ Read More »

ಮೂಲ್ಕಿ: ಉರುಳಿಗೆ ಬಿದ್ದ ಚಿರತೆ ನರಳಿ ಸಾವು

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿಯ ಗುಡ್ಡೆಯಲ್ಲಿ ಉರುಳಿಗೆ ಸಿಕ್ಕಿ ಚಿರತೆಯು ಒದ್ದಾಡಿ ಸಾವನ್ನಪ್ಪಿದೆ. ಇಲ್ಲಿನ ಉಳೆಪಾಡಿ ಮಿತ್ತಬೆಟ್ಟು ಬಳಿ ಗುಡ್ಡೆಯಲ್ಲಿ ಕಾಡು ಪ್ರಾಣಿಗಳ ಹಾವಳಿಯನ್ನು ತಡೆಯಲಾರದೆ ಸ್ಥಳೀಯರು ಇಟ್ಟಿದ್ದ ಉರುಳಿಗೆ ಆಹಾರ ಹುಡುಕಿ ಬಂದಿದ್ದ ಚಿರತೆ ರಾತ್ರಿ ಹೊತ್ತು ಬಿದ್ದಿರುವುದು ಬೆಳಕಿನ. ಮುಂಜಾನೆ ಹೊತ್ತಿಗೆ ಆಸು-ಪಾಸಿನ ಮನೆಯವರು ಗುಡ್ಡೆಯಲ್ಲಿ ನಾಯಿ ಬೊಗಳುವ ಶಬ್ದವನ್ನು ಕೇಳಿ ಭಯಭೀತರಾಗಿ ಸ್ಥಳಕ್ಕೆ ಧಾವಿಸಿದಾಗ ಉರುಳಿಗೆ ಚಿರತೆ ಬಿದ್ದು ಒದ್ದಾಡುತ್ತಿರುವುದು

ಮೂಲ್ಕಿ: ಉರುಳಿಗೆ ಬಿದ್ದ ಚಿರತೆ ನರಳಿ ಸಾವು Read More »

ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರಿನಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ – ಗೃಹಸಚಿವ ಪರಮೇಶ್ವರ್

ಸಮಗ್ರ ನ್ಯೂಸ್: ‘ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ’ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಅದರ ರೂಪುರೇಷೆ ಕಮಿಷನರ್ ತಯಾರಿಸುತ್ತಾರೆ. ಇದರ ಮುಖ್ಯ ಉದ್ದೇಶ ಅನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವುದು. ನೈತಿಕ ಪೊಲೀಸ್ ಗಿರಿ ನಡೆಯಲು ಅವಕಾಶವೇ ಕೊಡಬಾರದು. ಇಲ್ಲಿ ಯಶಸ್ವಿಯಾದರೆ ಇಡೀ ರಾಜ್ಯದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು.

ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರಿನಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ – ಗೃಹಸಚಿವ ಪರಮೇಶ್ವರ್ Read More »

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಒಡಿಶಾ ರೈಲು ದುರಂತದ ನೋವಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿದೆ. ಇದರ ನಡುವೆ ಕೆಲವು ಭಯಾನಕ ಘಟನೆಗಳೂ ನಡೆದಿದೆ. ಮಗನ ಬದುಕಿಸಲು ತಂದೆ ಬರೋಬ್ಬರಿ 230 ಕಿಲೋಮೀಟರ್ ಆಂಬ್ಯುಲೆನ್ಸ್ ಮೂಲಕ ತೆರಳಿ, ಕೊನೆಗೆ ಶವಗಾರದಲ್ಲಿಟ್ಟಿದ್ದ ಶವಗಳ ರಾಶಿಯಿಂದ ಮಗನ ಜೀವಂತವಾಗಿ ಹೊರತೆಗೆದು ಆಸ್ಪತ್ರೆ ದಾಖಲಿಸಿದ ಘಟನೆಯೂ ನಡೆದಿದೆ. ಎರಡು ದಿನದ ಸತತ ಹುಡುಕಾಟ ಹಾಗೂ ಪರಿಶ್ರಮದಿಂದ ಮಗನ ಜೀವವನ್ನು ಉಳಿಸಿದ ತಂದೆಗೆ ಎಲ್ಲರು ಶಹಬ್ಬಾಷ್ ಎಂದಿದ್ದಾರೆ. ಹೌರಾದ ಅಂಗಡಿ ಮಾಲೀಕ ಹೆಲರಾಮ್ ತನ್ನ 24 ವರ್ಷದ

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ… Read More »

ಬಾಡಿಗೆದಾರರಿಗೂ ಉಚಿತ ವಿದ್ಯುತ್| ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಸಮಗ್ರ ನ್ಯೂಸ್: ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ, ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಪೂರ್ಣ ದಾಖಲೆಗಳನ್ನು ನೀಡಬೇಕು. ಮಾಲೀಕನ ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ತೆರಿಗೆ ಕಟ್ಟಿರಬೇಕು. ಇಷ್ಟು ಬಾಡಿಗೆ ಮನೆಗಳಿದೆ, ಇಷ್ಟು ಮನೆಗಳಿಗೆ ನಾನು ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು. ಒಂದು ವೇಳೆ ತಪ್ಪು

ಬಾಡಿಗೆದಾರರಿಗೂ ಉಚಿತ ವಿದ್ಯುತ್| ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ Read More »

ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತುಲ್ಲ(KAS) ನೇಮಕ

ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತ್ತುಲ್ಲ ನೇಮಕರಾಗಿದ್ದಾರೆ. ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಹಿದಾಯುತ್ತುಲ್ಲಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಇವರು ಈ ಮೊದಲು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಕಂದಾಯ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಸದಾ ಜನರ ಪರವಾಗಿ ಇರುವ, ಪ್ರಾಮಾಣಿಕ ಕೆಎಎಸ್​ ಅಧಿಕಾರಿ ಹಿದಾಯತ್ತುಲ್ಲ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿಯಾಗಿದ್ದು,

ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತುಲ್ಲ(KAS) ನೇಮಕ Read More »

ಮಂಡ್ಯ: ದಶಪಥ ಹೆದ್ದಾರಿಯಲ್ಲಿ ಮೂರು ಸುತ್ತು ಪಲ್ಟಿ ಹೊಡೆದ ಕಾರು | ಐವರು ಜಖಂ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇನಲ್ಲಿ ನಡೆದಿದೆ. ಕಾರು ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿತ್ತು. ಭೀಕರ ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರೆಲ್ಲ ಬೆಂಗಳೂರು ಮೂಲದವರು ಎನ್ನಲಾಗಿದೆ.

ಮಂಡ್ಯ: ದಶಪಥ ಹೆದ್ದಾರಿಯಲ್ಲಿ ಮೂರು ಸುತ್ತು ಪಲ್ಟಿ ಹೊಡೆದ ಕಾರು | ಐವರು ಜಖಂ; ಇಬ್ಬರು ಗಂಭೀರ Read More »