June 2023

ಪುತ್ತೂರು: ವಿಷ ಪದಾರ್ಥ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತ್ಯು

ಸಮಗ್ರ ನ್ಯೂಸ್: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ನಡೆದಿದೆ. ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತಪಟ್ಟ ವಿದ್ಯಾರ್ಥಿನಿ. ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು.ಈ ನಡುವೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು. ಈ ನಡುವೆ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ […]

ಪುತ್ತೂರು: ವಿಷ ಪದಾರ್ಥ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತ್ಯು Read More »

ಒಡಿಶಾ ರೈಲು ದುರಂತದ ಅಸಲಿ ಕಾರಣಗಳೇನು? ಇಲ್ಲಿದೆ ಸಂಪೂರ್ಣ ಚಿತ್ರಣ

ಸಮಗ್ರ ನ್ಯೂಸ್: ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 233 ಮಂದಿ ಮೃತಪಟ್ಟು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸ್ವಾಂತತ್ರ್ಯ ಭಾರತದ ನಂತರ ಸಂಭವಿಸಿದ ಅತ್ಯಂತ ಮಾರಾಣಾಂತಿಕ ಅಪಘಾತಗಳಲ್ಲಿ ಒಡಿಶಾ ರೈಲು ದುರಂತ ಕೂಡ ಒಂದಾಗಿದೆ. ಈ ದುರಂತಕ್ಕೆ ಕಾರಣವೇನು? ಮತ್ತು ಅಪಘಾತ ಹೇಗೆ ಸಂಭವಿಸಿತು ಎಂಬ ಬಗ್ಗೆ ಮಾಹಿತಿ‌ ಇಲ್ಲಿದೆ. ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ

ಒಡಿಶಾ ರೈಲು ದುರಂತದ ಅಸಲಿ ಕಾರಣಗಳೇನು? ಇಲ್ಲಿದೆ ಸಂಪೂರ್ಣ ಚಿತ್ರಣ Read More »

ಒಡಿಶಾ ರೈಲು ದುರಂತ| ಸಾವಿನ ಸಂಖ್ಯೆ 233 ಕ್ಕೆ ಏರಿಕೆ| ಸಾವಿರದ ಸನಿಹದಲ್ಲಿ ಗಾಯಾಳುಗಳು

ಸಮಗ್ರ ನ್ಯೂಸ್: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದು (ಜೂ.03) ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ. ಬಹನಾಗಾ ರೈಲು ನಿಲ್ದಾಣದ

ಒಡಿಶಾ ರೈಲು ದುರಂತ| ಸಾವಿನ ಸಂಖ್ಯೆ 233 ಕ್ಕೆ ಏರಿಕೆ| ಸಾವಿರದ ಸನಿಹದಲ್ಲಿ ಗಾಯಾಳುಗಳು Read More »

ಒಡಿಶಾ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ದುರಂತ| 50 ಜನ ದುರ್ಮರಣ; 200ರ ಸನಿಹದಲ್ಲಿ ಗಾಯಾಳುಗಳು| ಸಾವಿನ ಸಂಖ್ಯೆ ಮತ್ತಷ್ಟು‌ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಡಿಕ್ಕಿ ಹೊಡೆದಿವೆ. ಡಿಕ್ಕಿ ಎಷ್ಟು ತೀವ್ರವಾಗಿತ್ತೆಂದರೆ, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ ನ (12841) 7 ಬೋಗಿಗಳು ಹಳಿ ತಪ್ಪಿವೆ. ಮೂಲಗಳ ಪ್ರಕಾರ, ಅಪಘಾತದಲ್ಲಿ ಇದುವರೆಗೆ 179 ಜನರು ಗಾಯಗೊಂಡಿದ್ದಾರೆ ಮತ್ತು 50 ಜನರು ಸಾವನ್ನಪ್ಪಿದ್ದಾರೆ. ಆದರೆ ರೈಲ್ವೆ ಇಲಾಖೆ ಇನ್ನೂ ಯಾವುದೇ ಮಾಹಿತಿ ಬಿಡುಗಡೆ ಮಾಡಿಲ್ಲ. ಗಾಯಗೊಂಡವರನ್ನು ಸೊರೊ ಸಿಎಚ್ಸಿ, ಗೋಪಾಲ್ಪುರ ಸಿಎಚ್ಸಿ

ಒಡಿಶಾ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ದುರಂತ| 50 ಜನ ದುರ್ಮರಣ; 200ರ ಸನಿಹದಲ್ಲಿ ಗಾಯಾಳುಗಳು| ಸಾವಿನ ಸಂಖ್ಯೆ ಮತ್ತಷ್ಟು‌ ಹೆಚ್ಚಳ ಸಾಧ್ಯತೆ Read More »

‘ಕಾಶ್ಮೀರ್ ಫೈಲ್ಸ್’, ‘ಕೇರಳ ಸ್ಟೋರಿ’ ಬಳಿಕ ಕನ್ನಡದಲ್ಲಿ ಸಂಚಲನ ಸೃಷ್ಟಿಸಿದ ಕರಾವಳಿ ಸ್ಟೋರಿ ‘ಬೇರ’| ಸಿನಿಮಾದ ಕಥಾ ಹಂದರ ಏನು ಗೊತ್ತಾ?

ಸಮಗ್ರ ನ್ಯೂಸ್: ‘ಕಾಶ್ಮೀರ್‌ ಫೈಲ್ಸ್‌’ ಹಾಗೂ ‘ಕೇರಳ ಸ್ಟೋರಿ’ ನಂತರ ಈಗ ಅದೇ ಹಾದಿಯಲ್ಲಿ ಕರಾವಳಿ ಸ್ಟೋರಿಯೊಂದು ಬಿಡುಗಡೆಯಾಗಲಿದೆ. ಈ ಕರಾವಳಿ ಸ್ಟೋರಿಯ ಸಿನಿಮಾ ಹೆಸರು ‘ಬೇರ’. ‘ಬೇರ’ ಎಂದರೆ ತುಳುವಿನಲ್ಲಿ ವ್ಯಾಪಾರ ಎಂದರ್ಥ. ದಕ್ಷಿಣ ಕನ್ನಡ ಜಿಲ್ಲೆ ಕಲ್ಲಡ್ಕದಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ ಹಿಂದೂ, ಮುಸ್ಲಿಂ ಘರ್ಷಣೆಯ ಕತೆ ಹೊಂದಿದೆ. ‘ಕಾಶ್ಮೀರ್‌ ಫೈಲ್ಸ್‌’, ‘ಕೇರಳ ಸ್ಟೋರಿ’ ಕ್ರಮವಾಗಿ ಕಾಶ್ಮೀರ ಮತ್ತು ಕೇರಳದ ವಾಸ್ತವ ಕತೆಯುಳ್ಳ ಸಿನಿಮಾಗಳು ಎಂಬ ಪ್ರತಿಪಾದನೆ ಚಾಲ್ತಿಯಲ್ಲಿರುವ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ಕೋಮು

‘ಕಾಶ್ಮೀರ್ ಫೈಲ್ಸ್’, ‘ಕೇರಳ ಸ್ಟೋರಿ’ ಬಳಿಕ ಕನ್ನಡದಲ್ಲಿ ಸಂಚಲನ ಸೃಷ್ಟಿಸಿದ ಕರಾವಳಿ ಸ್ಟೋರಿ ‘ಬೇರ’| ಸಿನಿಮಾದ ಕಥಾ ಹಂದರ ಏನು ಗೊತ್ತಾ? Read More »

ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು| ಅಪಾರ ಸಾವು ನೋವು ಸಾಧ್ಯತೆ

ಸಮಗ್ರ ನ್ಯೂಸ್: ಕೋರಮಂಡಲ್ ಎಕ್ಸ್ಪ್ರೆಸ್ ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಹಳಿ ತಪ್ಪಿದೆ. ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದ್ದರಿಂದ ಹೈಸ್ಪೀಡ್ ರೈಲು ಹಳಿ ತಪ್ಪಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲ್ವೆ ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ. ಎಲ್ಲಾ ರಕ್ಷಣಾ ಕಾರ್ಯಾಯರಣೆಯ ಅಗತ್ಯ ವ್ಯವಸ್ಥೆಗಳನ್ನು ಮಾಡಲು ಮತ್ತು ರಾಜ್ಯ ಮಟ್ಟದಿಂದ ಯಾವುದೇ

ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು| ಅಪಾರ ಸಾವು ನೋವು ಸಾಧ್ಯತೆ Read More »

ನಟ ಚೇತನ್ ಅಹಿಂಸಾಗೆ ಬಿಗ್ ರಿಲೀಫ್| ಜೂ.20ರವರೆಗೂ ಗಡಿಪಾರು ತಡೆಯಾಜ್ಞೆ ವಿಸ್ತರಣೆ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಅವರಿಗೆ ಒಸಿಐ ಮಾನ್ಯತೆ ರದ್ದಾಗುವ ವಿಚಾರವಾಗಿ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ. ಇಂದು ಕೋರ್ಟ್‌ ತಡೆಯಾಜ್ಞೆಯನ್ನು ಜೂನ್.20ರವರೆಗೆ ವಿಸ್ತರಿಸಿ ರಿಲೀಫ್ ನೀಡಿದೆ. ನಟ ಚೇತನ್ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ, ಕೇಂದ್ರ ಗೃಹ ಸಚಿವಾಲಯ ಭಾರತದ ಸಾಗರೋತ್ತರ ನಾಗರಿಕ ( OCI) ವೀಸಾವನ್ನು ರದ್ದುಗೊಳಿಸಲಾಗಿತ್ತು.ಇದನ್ನು ಪ್ರಶ್ನಿಸಿ ಚೇತನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅವರಿಗೆ ಒಸಿಐ ವೀಸಾ ರದ್ದು ಆದೇಶಕ್ಕೆ ತಡೆಯಾಜ್ಞೆಯನ್ನು

ನಟ ಚೇತನ್ ಅಹಿಂಸಾಗೆ ಬಿಗ್ ರಿಲೀಫ್| ಜೂ.20ರವರೆಗೂ ಗಡಿಪಾರು ತಡೆಯಾಜ್ಞೆ ವಿಸ್ತರಣೆ Read More »

ಮಹಿಳೆಯರಿಗೆ ಟಿಕೆಟ್ ಫ್ರೀ…ಪುರುಷರಿಗೆ 50% ರಿಸರ್ವೇಷನ್| ಯಾವ ಬಸ್ ಗಳಲ್ಲಿ ಉಚಿತ ಪ್ರಯಾಣ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಕಾಂಗ್ರೆಸ್‌ ವಿಧಾನಸಭೆ ಚುನಾವಣೆಗೂ ಮುನ್ನ ವೇಳೆ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿಗೆ ತರುವುದಾಗಿ ಹೇಳಿದೆ. ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲಾ ಯೋಜನೆಗಳನ್ನು ವಿವಿಧ ದಿನಾಂಕಗಳಲ್ಲಿ ಆಗಸ್ಟ್​ 15ರೊಳಗೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಜೂನ್‌ 11ರಿಂದ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಲಭ್ಯವಾಗಲಿದೆ. ರಾಜ್ಯದ ಎಲ್ಲಾ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಬಹುದಾಗಿದೆ. ರಾಜ್ಯದಲ್ಲಿ ಎಲ್ಲಿ ಬೇಕಾದರೂ ಮಹಿಳೆಯರು ಟಿಕೆಟ್ ಇಲ್ಲದೆ ಪ್ರಯಾಣಿಸಬಹುದಾಗಿದೆ. ಇನ್ನು ರಾಜ್ಯ ಸಾರಿಗೆ ಬಸ್‌ಗಳಲ್ಲಿ ಪುರುಷರಿಗೂ

ಮಹಿಳೆಯರಿಗೆ ಟಿಕೆಟ್ ಫ್ರೀ…ಪುರುಷರಿಗೆ 50% ರಿಸರ್ವೇಷನ್| ಯಾವ ಬಸ್ ಗಳಲ್ಲಿ ಉಚಿತ ಪ್ರಯಾಣ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಪಂಚಗ್ಯಾರಂಟಿಗೆ ಇದೆ ಹಲವು ಕಂಡೀಷನ್ಸ್| ಸಿಎಂ ಸಿದ್ದರಾಮಯ್ಯ ಹೇಳಿದ ವಿವರಗಳ‌ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಐದು ಗ್ಯಾರೆಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಯಾವುದೇ ಕಠಿಣ ಷರತ್ತುಗಳನ್ನು ವಿಧಿಸದೆ ಸಮ್ಮತಿಸಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಿಕ್ಕಿರಿದ ಪತ್ರಿಕಾ ಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಗ್ಯಾರೆಂಟಿಗಳ‌ ಜಾರಿ ಕುರಿತಂತೆ ಮಾಹಿತಿ ನೀಡಿದ್ದಾರೆ. ಗೃಹ ಜ್ಯೋತಿ ಯೋಜನೆ :ರಾಜ್ಯದ ಗೃಹ ಬಳಕೆದಾರರಿಗೆ ಗರಿಷ್ಠ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಈ

ಪಂಚಗ್ಯಾರಂಟಿಗೆ ಇದೆ ಹಲವು ಕಂಡೀಷನ್ಸ್| ಸಿಎಂ ಸಿದ್ದರಾಮಯ್ಯ ಹೇಳಿದ ವಿವರಗಳ‌ ಸಂಪೂರ್ಣ ಮಾಹಿತಿ… Read More »

ಸುಳ್ಯ: ಮರ್ಕಂಜದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ| ಬಂದ್ ಮಾಡಲು ಜಿಲ್ಲಾಧಿಕಾರಿ ಸೂಚನೆ..?

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಅಕ್ರಮವಾಗಿರುವ ಹಿನ್ನಲೆ ತಕ್ಷಣ ನಿಲ್ಲಿಸುವಂತೆ ಜಿಲ್ಲಾಧಿಕಾರಿಯ ಆದೇಶವಾಗಿರುವ ಬಗ್ಗೆ ತಿಳಿದು ಬಂದಿದೆ. ಕಳೆದ ಕೆಲ ವರ್ಷಗಳಿಂದ ಅಳವುಪಾರೆ ಎಂಬಲ್ಲಿ ಸ್ಥಳೀಯರ ವಿರೋಧದ ನಡುವೆಯೂ ನಡೆಯುತ್ತಿದ್ದ ಗಣಿಗಾರಿಕೆಯನ್ನು ಇದೀಗ ನಿಲ್ಲಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ. ಸುತ್ತಮುತ್ತ ನೂರಾರು ಮನೆಗಳು, ಹತ್ತಿರದಲ್ಲಿ ಸರ್ಕಾರಿ ಶಾಲೆ, ನೀರಿನ ಟ್ಯಾಂಕ್,ಸರ್ಕಾರಿ ಕಟ್ಟಗಳು, ದೇವಸ್ಥಾನ ಇದೆಲ್ಲಾ ಕಲ್ಲು ಗಣಿಗಾರಿಕೆ ನಡೆಯುವ ಸ್ಥಳದ ಹತ್ತಿರ

ಸುಳ್ಯ: ಮರ್ಕಂಜದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ| ಬಂದ್ ಮಾಡಲು ಜಿಲ್ಲಾಧಿಕಾರಿ ಸೂಚನೆ..? Read More »