June 2023

ಒಣ ಮೀನು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ ನಿಮಗಿದು ಗೊತ್ತೇ

ಸಮಗ್ರ ನ್ಯೂಸ್: ಹೆಚ್ಚಿನವರಿಗೆ ಒಣ ಮೀನು ಅದರ ವಾಸನೆ ಅಂದ್ರೆ ಆಗುವುದಿಲ್ಲ. ಆದರೆ ಇನ್ನು ಕೆಲವರಿಗೆ ಒಣ ಮೀನು ಇಲ್ಲದೇ ಊಟ ಹೋಗುವುದಿಲ್ಲ. ಮಲೆನಾಡಿಗರಿಗೆ ಊಟಕ್ಕೆ ಹಸಿ ಮೀನು ಸಂಬಾರ್‌ ಇಲ್ಲದಿದ್ದರೂ ಆಗುತ್ತದೆ ಆದ್ರೆ ಒಣ ಮೀನು ಇರಲೇ ಬೇಕು. ಊಟದ ಜೊತೆ ಪ್ರತಿನಿತ್ಯ ಸೇವಿಸುವ ಒಣ ಮೀನು ಆರೋಗ್ಯಕ್ಕೆ ಎಷ್ಟು ಉತ್ತಮ ಎಂದರೆ.. ಒಣ ಮೀನು ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಸಹಕಾರಿಯಾಗಿದೆ. ಈ ಡ್ರೈ ಫಿಶ್​ ಸಾಕಷ್ಟು ಪೌಷ್ಟಿಕಾಂಶದ ಅಂಶವನ್ನು ಹೊಂದಿದೆ. ಪ್ರೋಟೀನ್,ಆಂಟಿ-ಆಕ್ಸಿಡೆಂಟ್‌ಗಳು,ಸೋಡಿಯಂ,ಪೊಟ್ಯಾಸಿಯಮ್,ವಿಟಮಿನ್ ಬಿ 12,ಸೆಲೆನಿಯಮ್ […]

ಒಣ ಮೀನು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ ನಿಮಗಿದು ಗೊತ್ತೇ Read More »

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರ ಬಂಧನ

ಸಮಗ್ರ ನ್ಯೂಸ್:-ಕೆಂದ್ರ ಸರ್ಕಾರ 2000 ಮುಖಬೆಲೆಯ ನೋಟ ಬ್ಯಾನ್ ಮಾಡಿದ್ದ ಬೇನ್ನಲೇ ಕರ್ತನಾಕ ಖದೀಮರು ಜನರಿಗೆ ಪಂಗನಾಮ ಹಾಕಿದ ಘಟನೆಯೂಂದು ಕಾಗವಾಡದಲ್ಲಿ ಬೆಳಕಿಗೆ ಬಂದಿದೆ. 500 ಮುಖಬೆಲೆಯ 5 ಲಕ್ಷ ಕೋಟ್ಟು 2000 ಮುಖಬೆಲೆಯ ನೋಟನ್ನು 6 ಲಕ್ಷ ಪಡೆಯಿರಿ ಎಂದು ಹೇಳಿ ಮಹಾರಾಷ್ಟ್ರ ರಾಜ್ಯದ ಸಮೀರ ಭೋಸಲೆ ಎಂಬುವವರಿಗೆ ಖದೀಮರು ಪಂಗನಾಮ ಹಾಕಿದ್ದಾರೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ಸಮಿರ ಎಂಬುವರನ್ನು ಕರೆಸಿ ಅವರ ಕಡೆಯಿಂದ 500 ಮುಖಬೆಲೆಯ‌ 5 ಲಕ್ಷ ರೂಪಾಯಿ ಪಡೆದ ತಕ್ಷಣ

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರ ಬಂಧನ Read More »

ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ

ಸಮಗ್ರ ನ್ಯೂಸ್: ಇದೇ ತಿಂಗಳ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ AC ಬಸ್ ಮತ್ತು ಸ್ಲೀಪರ್ ಬಸ್ ಗಳನ್ನು ಹೊರತುಪಡಿಸಿ ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್​​ನಲ್ಲಿ ಸಂಚರಿಸಬಹುದಾಗಿದೆ’ ಎಂದು ತಿಳಿಸಿದರು.

ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ Read More »

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಗ್ಯಾರಂಟಿ ಯೋಜನೆಗಳ ಪೈಕಿ ನಂ.2 ಗೃಹ ಲಕ್ಷ್ಮೀ ಇದನ್ನು ಜಾರಿಗೊಳಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಬ್ಯಾಂಕ್ ಅಕೌಂಟ್ಸ್, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಯಾರು ಮನೆಯ ಯಜಮಾನಿ ಎಂಬುದು ತೀರ್ಮಾನಿಸಬೇಕಾಗಿದೆ. ನಾವು ಹೇಳಿರುವಂತದ್ದು ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ ಎಂದಿದ್ದೆವು. ಆದ್ದರಿಂದ ಅಕೌಂಟ್ ಮಾಹಿತಿ, ಆಧಾರ್ ಕಾರ್ಡ್, ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15ರ ಒಳಗಾಗಿ ಮನೆ ಒಡತಿಯ ಮಾಹಿತಿ ನೀಡಬೇಕು.

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ Read More »

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​​ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಮೊದಲ ಗ್ಯಾರಂಟಿ ಯೋಜನೆಯನ್ನು ಉಚಿತವಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಯಾವುದೇ ಜಾತಿ, ಧರ್ಮ, ಭಾಷೆ ಇಲ್ಲದೆ ಎಲ್ಲರಿಗೂ ಅನ್ವಯ ಆಗುವ ಹಾಗೆ ಗ್ಯಾರಂಟಿ ಜಾರಿ‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಮೊದಲ ಗ್ಯಾರಂಟಿಯಾಗಿರುವ, ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು,

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಧರ್ಮಸ್ಥಳ: ಸೌಜನ್ಯ ಕೊಲೆ ಪ್ರಕರಣ| ಜೂ.16ರಂದು ಸಿಬಿಐ ವಿಶೇಷ ಕೋರ್ಟ್ ನಿಂದ ತೀರ್ಪು ಪ್ರಕಟ

ಸಮಗ್ರ ನ್ಯೂಸ್: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಎರಡನೇ ಮಗಳು ಸೌಜನ್ಯ (17) ಕಾಲೇಜು ಮುಗಿಸಿ ಮನೆಗೆ ವಾಪಸ್ ಹೋಗುವಾಗ 2012ರ ಅಕ್ಟೋಬರ್ 9ರಂದು ಸಂಜೆ 4:15 ಕ್ಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ

ಧರ್ಮಸ್ಥಳ: ಸೌಜನ್ಯ ಕೊಲೆ ಪ್ರಕರಣ| ಜೂ.16ರಂದು ಸಿಬಿಐ ವಿಶೇಷ ಕೋರ್ಟ್ ನಿಂದ ತೀರ್ಪು ಪ್ರಕಟ Read More »

ಕಡಬ: ವಿದ್ಯುತ್ ಪ್ರವಹಿಸಿ‌ ಪವರ್ ಮ್ಯಾನ್ ಸಾವು ಪ್ರಕರಣ| ಮೆಸ್ಕಾಂ ಮೇಲಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ಪವರ್ ಮ್ಯಾನ್ ಗೆ ವಿದ್ಯುತ್ ಪ್ರವಹಿಸಿ ಗಂಭೀರ ಗಾಯಗೊಂಡು ಅಸುನೀಗಿದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ಗುರುವಾರ (ಜೂ 1) ನಡೆದಿದ್ದು, ಈ ಬಗ್ಗೆ ಮೃತಪಟ್ಟ ಯುವಕನ ತಂದೆ ನೀಡಿದ ದೂರಿನ ಅನ್ವಯ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಮೃತಪಟ್ಟ ಪವರ್ ಮ್ಯಾನ್. ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗಿತ್ತು. ಇದರ

ಕಡಬ: ವಿದ್ಯುತ್ ಪ್ರವಹಿಸಿ‌ ಪವರ್ ಮ್ಯಾನ್ ಸಾವು ಪ್ರಕರಣ| ಮೆಸ್ಕಾಂ ಮೇಲಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲು Read More »

ಚಲಿಸುತ್ತಿರುವ ಸ್ಕೂಟರ್ ನಲ್ಲಿ ಗಂಡು ಹೈಕ್ಳ ಡೀಪ್ ಲಿಪ್ ಲಾಕ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ ಪ್ರತಿದಿನ ಒಂದಿಲ್ಲೊಂದು ವಿಡಿಯೋಗಳು ಸಖತ್ ವೈರಲ್ ಆಗುತ್ತಲೇ ಇರುತ್ತೇವೆ. ಸದ್ಯ, ಉತ್ತರ ಪ್ರದೇಶದಲ್ಲಿ ಅಂತಹದ್ದೇ ವಿಡಿಯೋವೊಂದು ಹಲ್ ಚಲ್ಸೃಷ್ಟಿಸಿದ್ದು ಇದನ್ನು ನೋಡಿ, ನೆಟ್ಟಿಗರು ಕಿಡಿಕಾರಿದ್ದು, ಇಂತಹ ಕೆಲಸ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಡಿಯೋದಲ್ಲಿ ಮೂವರು ಯುವಕರು ಸ್ಕೂಟರ್‌ ಹೋಗುತ್ತಿರುವುದನ್ನು ಕಾಣಬಹುದು. ಹಿಂಬದಿಯ ಇಬ್ಬರು ಸವಾರರು ಪ್ರಪಂಚದ ಪರಿವೇ ಇಲ್ಲವೆಂಬಂತೆ ಲಿಪ್ ಲಾಕ್‌

ಚಲಿಸುತ್ತಿರುವ ಸ್ಕೂಟರ್ ನಲ್ಲಿ ಗಂಡು ಹೈಕ್ಳ ಡೀಪ್ ಲಿಪ್ ಲಾಕ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ Read More »

ಚಿಕ್ಕಮಗಳೂರು: ನ್ಯಾಯಕ್ಕಾಗಿ ಮಗುವಿನೊಂದಿಗೆ ನಡುರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ

ಸಮಗ್ರ ನ್ಯೂಸ್: ನ್ಯಾಯಕ್ಕಾಗಿ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗುವಿನ ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಜಿಲ್ಲೆಯ ಕಳಸದಲ್ಲಿ ನಡೆದಿದೆ. ಸಂಸೆ ಗ್ರಾಮದ ಮಹಿಳೆಯೊಬ್ಬರು ತನ್ನ ಮತ್ತು ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಇಬ್ಬರು ಯುವಕರ ಮೇಲೆ ಕುದುರೆಮುಖ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ಆದರೆ ಕುದುರೆಮುಖ ಪೊಲೀಸರು ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಕಳಸ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿಯವರೆಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪಕ್ಕದ ಮನೆಯ ಯುವಕರು

ಚಿಕ್ಕಮಗಳೂರು: ನ್ಯಾಯಕ್ಕಾಗಿ ಮಗುವಿನೊಂದಿಗೆ ನಡುರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ Read More »

ಕಡಬ: ಮನೆಯ ಮೇಲ್ಚಾವಣಿಯಿಂದ ಬಿದ್ದು ಯುವಕ ಸಾವು

ಸಮಗ್ರ ನ್ಯೂಸ್: ನಿರ್ಮಾಣ ಹಂತದಲ್ಲಿದ್ದ ಮನೆಯ ಮೇಲ್ಛಾವಣಿಯಿಂದ ಕಾರ್ಮಿಕನೋರ್ವ ಆಯ ತಪ್ಪಿ ಬಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ. 02 ರಂದು ನೆಟ್ಟಣ ಎಂಬಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಅವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ನೆಟ್ಟಣದ ಮೇರೊಂಜಿ ಎಂಬಲ್ಲಿ ಮನೆಯ ಮೇಲ್ಛಾವಣಿಯ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹರಿಪ್ರಸಾದ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಡಬ: ಮನೆಯ ಮೇಲ್ಚಾವಣಿಯಿಂದ ಬಿದ್ದು ಯುವಕ ಸಾವು Read More »