ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣರನ್ನು ನೇಮಕ ಮಾಡಿ, ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ. ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ Read More »