‘ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸಲು ಅಧಿಕಾರಿಗಳೂ ಸಹಕರಿಸಿ’|ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ
ಸಮಗ್ರ ನ್ಯೂಸ್: ಸರಕಾರದ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳ ಜವಬ್ದಾರಿ ಹೆಚ್ಚಿನದ್ದು. ಅಧಿಕಾರಿಗಳು ಜನರನ್ನು ಯಾವುದೇ ಕಾರಣಕ್ಕೂ ಸತಾಯಿಸದೇ ಅವರಿಗೆ ಸೂಕ್ತ ಸಲಹೆಗಳನ್ನು ನೀಡಿ ಅವರ ಕೆಲಸಗಳನ್ನು ಮಾಡಿಕೊಡಬೇಕು. ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಕನಸಿಗೆ ಅಧಿಕಾರಿಗಳು ಸಹಕರಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದರು. ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಬುಧವಾರ ಮಾತನಾಡಿದರು. ಅಧಿಕಾರಿಗಳು ತಮ್ಮ ಕ್ಷೇತ್ರದಲ್ಲಿ ಉತ್ತಮ ಅನುಭವವನ್ನು […]