Ad Widget .

ಕರಾವಳಿ ಭಾಗ ಸೇರಿದಂತೆ ಹಲವೆಡೆನಕಲಿ ನೋಟಿನ ಹಾವಳಿ|ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ RBI

Samagra news: ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 FIR ಗಳು ದಾಖಲಾಗಿವೆ.

Ad Widget . Ad Widget .

ಕರಾವಳಿಯ ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚಿನ ಬ್ಯಾಂಕ್’ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. RBIಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ.

Ad Widget . Ad Widget .

RBI ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ , ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಮೇಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬ್ಯಾಂಕ್ ಮ್ಯಾನೇಜರ್’ಗಳನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ನಕಲಿ ನೋಟಿನ ಜಾಲದ ಹಿಂದೆ ಬಿದ್ದಿದ್ದಾರೆ.

Leave a Comment

Your email address will not be published. Required fields are marked *