ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು

ಸಮಗ್ರ ನ್ಯೂಸ್: ಮನೆಯೊಂದರಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಯುವಕ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದಲ್ಲಿ ನಡೆದಿದೆ.
ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ.

Ad Widget ... ..

ಯತೀಶ್ ಅವರು ಕೈಕಂಬದ ಹೋಲಿ ಪ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ.

Ad Widget

ವಸತಿ ನಿಲಯದ ಕೆಳ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಲೆಗೆ ಗಂಭೀರವಾದ ಗಾಯವಾಗಿದ್ದ ಹಿನ್ನಲೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *