ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಪೂರ್ಣಗೊಂಡು, ಹೊಸ ಸರ್ಕಾರ ರಚನೆಗೊಂಡರೂ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆಂದು ಹೇಳಿದೆ.
ಟ್ವೀಟ್ ನಲ್ಲಿ ವಿರೋಧ ಪಕ್ಷ ನಾಯಕನಲ್ಲಿ ಇರಬೇಕಾದ ಲಕ್ಷಣಗಳನ್ನೂ ಕಾಂಗ್ರೆಸ್ ತಿಳಿಸಿದೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆಂದು ಹೇಳಿ, ಬಿಜೆಪಿ ಕುರಿತು ವ್ಯಂಗ್ಯವಾಡಿದೆ.