Ad Widget .

ವಿಟ್ಲ: ಏಕಕಾಲಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಗಂಡ-ಹೆಂಡತಿ| ಪತಿ ಸಾವು; ಪತ್ನಿ ಗಂಭೀರ| ತಬ್ಬಲಿಯಾದ ಅವಳಿ ಕಂದಮ್ಮಗಳು

ಸಮಗ್ರ ನ್ಯೂಸ್: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಪತಿ‌ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬಾಕಿಲ ಎಂಬಲ್ಲಿ ನಡೆದಿದೆ .

Ad Widget . Ad Widget .

ಬಾಕಿಲ ನಿವಾಸಿಗಳಾದ ಪ್ರತಾಪ್‌ ಹಾಗೂ ವೀಣಾ ದಂಪತಿ‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದಂಪತಿಗೆ ಐದು ವರ್ಷದ ಅವಳಿ ಜವಳಿ ಮಕ್ಕಳಿದ್ದಾರೆ‌.

Ad Widget . Ad Widget .

ಎದುರು ಮನೆಯಲ್ಲಿದ್ದ ಮಕ್ಕಳು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ನೆರೆಮನೆಯವರಿಗೆ ತಿಳಿಸಿದ್ದಾರೆ ‌.

ಕೂಡಲೇ ಇವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪ್ರತಾಪ್‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ವೀಣಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *