ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಜುಲೈ 3ರಂದು ಉತ್ತರ ಕನ್ನಡ,ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’, ಜುಲೈ 4ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’, ಬೆಳಗಾವಿ, ಧಾರವಾಡ, ಹಾವೇರಿ, ತುಮಕೂರು, ಮೈಸೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದರೆ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಜುಲೈ ಮೊದಲ ವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಅಲ್ಲಿವರೆಗೆ ತಾಲೂಕು ಹಾಗೂ ಜಿಲ್ಲೆಗಳ ಬರಪೀಡಿತ ಎಂದು ಘೋಷಿಸುವ ಮೊದಲು ಕಾಯಲು ನಿರ್ಧರಿಸಿದ್ದಾಗಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ರಾಜ್ಯದ 31 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದೆ. ಜುಲೈನಲ್ಲಿ ಗರಿಷ್ಠ ಮಳೆ ಆಗುವ ಸಾಧ್ಯತೆ ಇದ್ದು, ಕೊರತೆ ನೀಗಿಸುವ ಆಶಾಭಾವ ಇದೆ. ಜೂನ್ ತಿಂಗಳಲ್ಲಿ ಸಾಮಾನ್ಯವಾಗಿ 150 ಮಿ.ಮೀ ಮಳೆಯಾಗುತ್ತಿತ್ತು. ಆದರೆ ಈ ವರ್ಷ ಕೇವಲ 75 ಮಿ.ಮೀ ಮಳೆಯಾಗಿದೆ ಎನ್ನಲಾಗಿದೆ. ಅದು ಕೂಡ ಕಳೆದ ವಾರ ಸುರಿದ ಮಳೆಯ ಪಾಲು ಹೆಚ್ಚಿದೆ. ಈ ಮೂಲಕ ಜೂನ್‌ನಲ್ಲಿ ಶೇ. 50ರಷ್ಟು ಮಳೆ ಕೊರತೆಯಾಗಿದೆ.