ಸಮಗ್ರ ನ್ಯೂಸ್: ಸುಳ್ಯ ಪೊಲೀಸ್ ಠಾಣೆಯಲ್ಲಿ ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಮಧು ಜಿ.ಡಿ. ಅವರು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2021-22 ನೇ ಸಾಲಿನ ಜುಲೈ ಆವೃತ್ತಿಯ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ 774 ಅಂಕ ಪಡೆದು ಪ್ರಥಮ ರ‍್ಯಾಂಕ್ ಪಡೆದು, ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಮೈಸೂರಿನ ಕರಾಮುವಿಯ ಘಟಿಕೋತ್ಸವ ಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಮಧು ಅವರಿಗೆ ಪದಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಗಣ್ಯರು ಉಪಸ್ಥಿತರಿದ್ದರು. ಮಧು ಅವರು ಪಿರಿಯಾಪಟ್ಟಣ ತಾಲೂಕಿನ ಗಂಗೂರು ಗ್ರಾಮದ ನಿವಾಸಿ.