Ad Widget .

ಸುಳ್ಯ: ಶರಣಾಗದ ಪ್ರವೀಣ್ ಹತ್ಯೆ‌ ಆರೋಪಿಗಳು| ಆಸ್ತಿ ಮುಟ್ಟುಗೋಲಿಗೆ ಮುಂದಾದ ಎನ್ಐಎ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಶರಣಾಗುವಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನೀಡಿರುವ ಅವಧಿ ಮುಕ್ತಾಯಗೊಂಡಿದೆ.

Ad Widget . Ad Widget .

ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗದೇ ಇರುವ ಕಾರಣಕ್ಕೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಎನ್‌ಐಎ ಮುಂದಾಗಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ನೀಡಲಾದ ಆಸ್ತಿ ಮುಟ್ಟುಗೋಲು ಎಚ್ಚರಿಕೆಗೂ ಆರೋಪಿಗಳು ಮನ್ನಣೆ ನೀಡಿಲ್ಲ.

Ad Widget . Ad Widget .

ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂನ್ 30ರೊಳಗೆ ನ್ಯಾಯಾಲಯದ ಮುಂದೆ ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಧ್ವನಿವರ್ಧಕದ ಮೂಲಕ ಸುಳ್ಯ, ಬೆಳ್ಳಾರೆ ಪರಿಸರಗಳಲ್ಲಿ ಘೋಷಣೆ ಮಾಡಲಾಗಿತ್ತು. ಆರೋಪಿಗಳ ಮನೆ ಬಾಗಿಲಿಗೆ ಈ ಬಗ್ಗೆ ಭಿತ್ತಿಪತ್ರ ಅಂಟಿಸುವ ಮೂಲಕವೂ ಗಡುವು ನೀಡಲಾಗಿತ್ತು.

ಆದರೆ ಆರೋಪಿಗಳು ಇದುವರೆಗೂ ಶರಣಾಗಿಲ್ಲ. ಹೀಗಾಗಿ ಆಸ್ತಿಗಳನ್ನು ಜಪ್ತಿ ಮಾಡುವುದಕ್ಕೆ ಎನ್‌ಐಎ ಮುಂದಾಗಿದೆ. ಆರೋಪಿಗಳ ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಮಾಹಿತಿಯನ್ನು ಎನ್‌ಐಎ ಅಧಿಕಾರಿಗಳು ಕಂದಾಯ ಇಲಾಖೆ, ಬ್ಯಾಂಕ್‌ಗಳು ಮತ್ತಿತರ ಮೂಲಗಳಿಂದ ಸಂಗ್ರಹಿಸುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ. ಆರೋಪಿಗಳ ಹೆಸರಿನಲ್ಲಿರುವ ಆಸ್ತಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ನಂತರ ಆರೋಪಿಯದ್ದೇ ಆಸ್ತಿ ಎಂದು ದೃಢೀಕರಣಗೊಂಡಲ್ಲಿ ಮುಟ್ಟುಗೋಲು ಹಾಕಿಕೊಂಡು ಸರಕಾರದ ವಶಕ್ಕೆ ಪಡೆಯಬಹುದು ಎಂದು ಹೇಳಲಾಗುತ್ತಿದೆ.

ಪ್ರಕರಣದ ಹಿನ್ನೆಲೆ: ಕಳೆದ ವರ್ಷದ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ರಾತ್ರಿ 8 ಗಂಟೆಯ ಸುಮಾರಿಗೆ ಪ್ರವೀಣ್ ಬೈಕ್‌ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಮುಸುಕುಧಾರಿಗಳು ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್​ರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದರು. ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ವಿಶೇಷ ತಂಡಗಳನ್ನು ರಚಿಸಿತ್ತು. ನಂತರ ನಡೆದ ಬೆಳವಣಿಗೆಗಳಲ್ಲಿ ಕೊಲೆಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.

Leave a Comment

Your email address will not be published. Required fields are marked *