ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಂಗಳೂರು ಸೇರಿ 5 ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು(ಮಂಗಳವಾರ) ರಜೆ ಘೋಷಣೆ ಮಾಡಿದೆ.
ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ 4ರಂದು ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.