Ad Widget .

ಭಾರೀ ವರ್ಷಧಾರೆ ಹಿನ್ನೆಲೆ| ಚಿಕ್ಕಮಗಳೂರು ಜಿಲ್ಲೆಗೆ ಹೈ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲಾಡಳಿತ ಮುಂದಿನ 3 ದಿನ ಭಾರೀ ಮಳೆ ಸುರಿಯುವ ಎಚ್ಚರಿಕೆ ನೀಡಿದೆ.

Ad Widget . Ad Widget .

ಜು. 5, 6 ಹಾಗೂ 7 ರಂದು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 3 ದಿನ 115 ರಿಂದ 204 ಮಿ.ಮೀ. ಮಳೆ ಸಾಧ್ಯತೆಯಿದ್ದು ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.

Ad Widget . Ad Widget .

ಸಾರ್ವಜನಿಕರು, ವಾಹನ ಸವಾರರು ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ ಸೂಚನೆ ನೀಡಲಾಗಿದೆ. ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಪೋಷಕರು, ಶಾಲಾ ಮುಖ್ಯಸ್ಥರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಹಿರಿಯರು ತಮ್ಮ ಮನೆಗಳಿಂದ ಹೊರಬಾರದಂತೆ, ಅನಿವಾರ್ಯವಾದಲ್ಲಿ ಮನೆ ಸದಸ್ಯರ ಜೊತೆ ಹೊರ ಹೋಗುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನವನ್ನು ಪಾಲಿಸುವಂತೆ ತಿಳಿಸಲಾಗಿದೆ.

Leave a Comment

Your email address will not be published. Required fields are marked *