Ad Widget .

9ನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದ ಭಾರತ| ಸ್ಯಾಪ್ ಪುಟ್ಬಾಲ್ ಚಾಂಪಿಯನ್ ಆದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್‌ ಖ್ಯಾತಿಯ ಭಾರತ ಫುಟ್‌ಬಾಲ್‌ ತಂಡ 2023ರ ಸಾಲಿನ ಸ್ಯಾಫ್‌ ಫುಟ್‌ಬಾಲ್‌ ಚಾಂಪಿಯನ್‌ ಷಿಪ್‌ನಲ್ಲಿ ಪ್ರಶಸ್ತಿ ಜಯಿಸಿದೆ. ಮಂಗಳವಾರ ಶ್ರೀಕಂಠೀರವ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ ಕುವೈತ್‌ ತಂಡವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್‌ ಆಯಿತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲುಗಳಿಂದ ಡ್ರಾ ಕಂಡಿದ್ದರೆ, ಫಲಿತಾಂಶ ನಿರ್ಣಯಕ್ಕಾಗಿ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್‌ ತಂಡವನ್ನು ಮಣಿಸಿತು.

Ad Widget . Ad Widget . Ad Widget .

ಪೆನಾಲ್ಟಿ ಶೂಟೌಟ್‌ನ ತಲಾ ಐದು ಅವಕಾಶ ಮುಕ್ತಾಯವಾದಾಗ ಎರಡೂ ತಂಡಗಳು 4-4 ಗೋಲುಗಳ ಸಮಬಲ ಕಂಡಿತ್ತು. ಬಳಿಕ ನಡೆದ ಸಡನ್‌ ಡೆತ್‌ನಲ್ಲಿ ಕುವೈತ್‌ನ ಖಲೀದ್‌ ಎಲ್‌ ಅಬ್ರಾಹಂ ಗೋಲನ್ನು ಮಿಸ್‌ ಮಾಡಿದರೆ, ಭಾರತದ ಪರವಾಗಿ ಎನ್‌.ಮಹೇಶ್‌
ಗೋಲು ಸಿಡಿಸಿದರು.

ಅದರೊಂದಿಗೆ ಭಾರತ ತಂಡ 9ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು. ಅದಲ್ಲದೆ, ಭಾರತಕ್ಕೆ ಇದು ಸತತ 2ನೇ ಸ್ಯಾಫ್‌ ಗೆಲುವಾಗಿದೆ. ಕಳೆದ ಬಾರಿ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡ ಮಾಲ್ಡೀವ್ಸ್‌ ವಿರುದ್ಧ ಗೆಲುವು ಕಂಡಿತ್ತು.

Leave a Comment

Your email address will not be published. Required fields are marked *