Ad Widget .

ಕೇರಳದಲ್ಲಿ ಮಳೆ ಅವಾಂತರ| ರಾಜ್ಯದಾದ್ಯಂತ ರೆಡ್ ಅಲರ್ಟ್| ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕೇರಳದಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇದೇ ರೀತಿ ಕರ್ನಾಟಕದ ಕರಾವಳಿಯಲ್ಲಿಯೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Ad Widget . Ad Widget .

ಭಾರೀ ಮಳೆ ಸುರಿಯುವ ಮನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಇಡುಕ್ಕಿ, ತ್ರಿಶೂರ್ ಮತ್ತು ಎರ್ನಾಕುಲಂ ಜಿಲ್ಲಾಧಿಕಾರಿಗಳು ಬುಧವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ಗಳನ್ನು ಹೊರಡಿಸಿದ್ದು, ಬುಧವಾರ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

Ad Widget . Ad Widget .

ಈ ಜಿಲ್ಲೆಗಳಿಗೆ ಐಎಂಡಿ ರೆಡ್‌ ಅಲರ್ಟ್ ನೀಡಿದೆ. ಇದಕ್ಕೂ ಮುನ್ನ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ಮುಂಚಿತವಾಗಿ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಣ್ಣೂರು, ಇಡುಕ್ಕಿ, ತ್ರಿಶೂರ್ ಮತ್ತು ಎರ್ನಾಕುಲಂ ಜಿಲ್ಲಾಧಿಕಾರಿಗಳು ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಕಾಸರಗೋಡು ಜಿಲ್ಲಾಧಿಕಾರಿಗಳು ಶಾಲೆಗಳಿಗೆ ಮಾತ್ರ ರಜೆ ನೀಡುವುದಾಗಿ ಘೋಷಿಸಿದ್ದಾರೆ.

ಕೇರಳದಲ್ಲಿ ಮಂಗಳವಾರ ವ್ಯಾಪಕ ಮಳೆಯಾಗಿದೆ. ಕೊಚ್ಚಿ ನಗರ, ಆಲಪ್ಪುಳದ ಕೆಲವು ಭಾಗಗಳು ಮತ್ತು ಮಣಿಮಲಯಾರ್ ನದಿಯ ಸುತ್ತಲಿನ ಪ್ರದೇಶಗಳಲ್ಲಿ ಮಳೆ ಸುರಿದಿದೆ. ಇದರಿಂದ ವಿವಿಧ ಸ್ಥಳಗಳಲ್ಲಿ ಜಲಾವೃತವಾಗಿದೆ.

ಪಾಲಕ್ಕಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ತೆಂಗಿನ ಮರವೊಂದು ಉರುಳಿ ಬಿದ್ದು ತಂಗಮಣಿ(55) ಎಂಬವರು ಸಾವನ್ನಪ್ಪಿದ್ದಾರೆ.

Leave a Comment

Your email address will not be published. Required fields are marked *