ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಆದೇಶಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824 – 2442590‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *