ಸಮಗ್ರ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಮೊಬೈಲ್ ಮಾರುಕಟ್ಟೆಗೆ ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಗ್ರ್ಯಾಂಡ್ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 MP ಸೆನ್ಸಾರ್ ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಹೈ ಲೆವೆಲ್ ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡುಬರುವ ಟ್ರೈ ಸ್ಟೇಟ್ ಅಲರ್ಟ್ ಸ್ಲೈಡರ್ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ 6.74 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 40Hz – 120Hz ಮತ್ತು 450ppi ಪಿಕ್ಸೆಲ್ ಸಾಂದ್ರತೆಯ ನಡುವೆ ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿರುವ ಡೈನಾಮಿಕ್ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ನೆಟ್‌ಫ್ಲಿಕ್ಸ್ ಮತ್ತು ಅಮೆಜಾನ್ ಪ್ರೈಮ್ ವಿಡಿಯೋ HDR ವಿಷಯವನ್ನು ನೋಡುವಾಗ ಸ್ಕ್ರೀನ್ HDR10+ ಬೆಂಬಲಿಸಲಿದೆ ಎಂದು ಒನ್‌ಪ್ಲಸ್ ಕಂಪೆನಿ ಹೇಳಿದೆ.
ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಮಾಲಿ -G710 MC10 GPU ಸಪೋರ್ಟ್ ಅನ್ನು ಪಡೆದಿದೆ. ಇದು ಆಂಡ್ರಾಯ್ಡ್ 13-ಆಧಾರಿತ OxygenOS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ Sony IMX890 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಅನ್ನು ಪಡೆದುಕೊಂಡಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ಗಳನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.