Ad Widget .

Breaking|ಮಂಗಳೂರು: ಕಾಲೇಜು ಮೇಲ್ಚಾವಣಿ ಕುಸಿತ; ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರದ ಮಳೆಯಾಗುತ್ತಿದ್ದು, ತಲಪಾಡಿಯಲ್ಲಿರುವ ಕಾಲೇಜಿನ ಮೇಲ್ಚಾವಣಿ ಕುಸಿದಿರುವ ಘಟನೆ ನಡೆದಿದೆ.

Ad Widget . Ad Widget .

ತಲಪಾಡಿಯಲ್ಲಿರುವ ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ನಲ್ಲಿರುವ ಆರು ಮಹಡಿಯ ಕಾಲೇಜಿನ ಅಳವಡಿಸಲಾಗಿದ್ದ ಶೀಟ್ ಭಾರೀ ಮಳೆ, ಗಾಳಿಗೆ ಕುಸಿದು ಬಿದ್ದಿದೆ. ಮಳೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಣೆ ಮಾಡಿರುವುದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

Ad Widget . Ad Widget .

ಮಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಬುಧವಾರ ಮತ್ತು ಗುರುವಾರ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *