ಕರಾವಳಿಯಲ್ಲಿ ಮಳೆ ಹಾನಿ ಪರಿಶೀಲಿಸಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಿ|ಸಚಿವರಿಗೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Ad Widget ... ..

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.

Ad Widget

ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದರು.

Leave a Comment

Your email address will not be published. Required fields are marked *