ಕೈಲಾಸವಾಸಿ ನಿತ್ಯಾನಂದನ ಇಬ್ಬರು ಶಿಷ್ಯೆಯರ ಮೇಲೆ ಜಾಮೀನು ರಹಿತ ವಾರಂಟ್

ಸಮಗ್ರ ನ್ಯೂಸ್: ಪರಾರಿಯಾಗಿರುವ ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿಯ ಇಬ್ಬರು ಶಿಷ್ಯರ ವಿರುದ್ಧ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

Ad Widget ... ..

ರಾಮನಗರ ಜಿಲ್ಲಾ ನ್ಯಾಯಾಲಯವು ನಿತ್ಯಾನಂದನ ಶಿಷ್ಯರಾದ ಶಿವವಲ್ಲಭನೇನಿ ಮತ್ತು ಜಮುನಾ ರಾಣಿ ವಿರುದ್ಧ ವಾರಂಟ್ ಜಾರಿಯಾಗಿದೆ. ಭಕ್ತೆಯೊಬ್ಬರ ಮೇಲೆ ನಿತ್ಯಾನಂದ ಸ್ವಾಮೀಜಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಅವರ ಇಬ್ಬರು ಅನುಯಾಯಿಗಳನ್ನು ಮೂರು ಮತ್ತು ಆರನೇ ಆರೋಪಿಗಳೆಂದು ಹೆಸರಿಸಲಾಗಿದೆ.

Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಎಲ್ಲಾ ತೀರ್ಪುಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಈ ಇಬ್ಬರು ಆರೋಪಿಗಳು ವಿಚಾರಣೆಗಾಗಿ ನ್ಯಾಯಾಲಯದ ಎದುರು ಹಾಜರಾಗದೆ, ಕೋರ್ಟ್‌ನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ.

Leave a Comment

Your email address will not be published. Required fields are marked *