ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆ ಖಾಯಂ

ಸಮಗ್ರ ನ್ಯೂಸ್: ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ.

Ad Widget ... ..

ರಾಹುಲ್​ ಗಾಂಧಿಗೆ ಹಿನ್ನಡೆಯಾಗಿದೆ. ಮಾರ್ಚ್​ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು.

Ad Widget

ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3 ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

Leave a Comment

Your email address will not be published. Required fields are marked *