ಬೆಳ್ತಂಗಡಿ- ಗಡಾಯಿಕಲ್ಲು ಚಾರಣಕ್ಕೆ ಬ್ರೇಕ್

ಸಮಗ್ರ ನ್ಯೂಸ್: ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬೆಳ್ತಂಗಡಿಯ ನಡ ಗ್ರಾಮದಲ್ಲಿರುವ ಸಾವಿರ ಅಡಿ ಎತ್ತರದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.

. Ad Widget . Ad Widget . Ad Widget .

ಧಾರಾಕಾರ ಸುರಿಯುತ್ತಿರುವ ಮಳೆಯಿಂದ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಸಾಧ್ಯತೆಗಳು ಇರುವುದರಿಂದ ಜು.7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಇಲಾಖೆಯ ವಲಯಾರಣ್ಯಧಿಕಾರಿ ಸ್ವಾತಿ ಅವರು ತಿಳಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಧರ್ಮಸ್ಥಳಕ್ಕೆ ತುಂಬ ಹತ್ತಿರದಲ್ಲಿಯೇ ಗಡಾಯಿಕಲ್ಲು ಕೋಟೆಯಿದ್ದು ಇದು ಕುದುರೇಮುಖ ಪರ್ವತ ಶ್ರೇಣಿಯ ಭಾಗವಾಗಿದೆ. ಚಾರಣಪ್ರಿಯರು ತುಂಬಾ ಇಷ್ಟಪಡುವ ಪ್ರವಾಸಿ ತಾಣವಿದಾಗಿದೆ. ಇದನ್ನು ನರಸಿಂಹ ಗಢ, ಜಮಲಾಬಾದ್ ಕೋಟೆ ಎಂದು ಕೂಡ ಕರೆಯುತ್ತಾರೆ.

ಸಮುದ್ರ ಮಟ್ಟದಿಂದ 1,788 ಅಡಿ ಎತ್ತರದಲ್ಲಿರುವ ಈ ಗಡಾಯಿಕಲ್ಲು ಬೆಳ್ತಂಗಡಿ ಪಟ್ಟಣದಿಂದ 8 ಕಿಮೀ ದೂರದಲ್ಲಿದೆ. ಗಡಾಯಿಕಲ್ಲು ಮಂಗಳೂರಿನಿಂದ ಸುಮಾರು 60 ಕಿ.ಮೀ, ಧರ್ಮಸ್ಥಳದಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಬೆಳ್ತಂಗಡಿಯಿಂದ ಮಂಜೊಟ್ಟಿಗೆ ಬಂದು ಚಾರಣ ಪ್ರಾರಂಭಿಸಿ ಗಡಾಯಿಕಲ್ಲು ತಲುಪಬಹುದು.

Leave a Comment

Your email address will not be published. Required fields are marked *