ಚಾರ್ಮಾಡಿ ಘಾಟ್ ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ| ಚಾಲಕರು ಗಂಭೀರ; ನಡೆದೇ ಸಾಗಿದ ಪ್ರಯಾಣಿಕರು

ಸಮಗ್ರ ನ್ಯೂಸ್: ದಟ್ಟವಾದ ಮಂಜು ಆವರಿಸಿದ ಪರಿಣಾಮ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಎರಡು ಸರ್ಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

. Ad Widget . Ad Widget

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಸಾಗುತ್ತಿದ್ದ ಬಸ್ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಗಳು ಇಕ್ಕಟ್ಟಾದ ರಸ್ತೆಯಲ್ಲಿ ಶುಕ್ರವಾರ ಸಂಜೆ ಮುಖಾಮುಖಿ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.

. Ad Widget . . Ad Widget . Ad Widget

ಅಪಘಾತಕ್ಕೀಡಾದ ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದರು. ಅಪಘಾತಕ್ಕೆ ರಸ್ತೆ ಕಾಮಗಾರಿ ಕಾರಣ ಎಂದು ಹೇಳಲಾಗುತ್ತಿದೆ. 2019ರಲ್ಲಿ ಕುಸಿದಿದ್ದ ರಸ್ತೆ ಕಾಮಗಾರಿ ಇನ್ನೂ ಪೂರ್ಣವಾಗದೇ ಇರುವುದರಿಂದ ಆಕ್ರೋಶಗೊಂಡಿರುವ ವಾಹನ ಸವರಾರರು, ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹಿಸಿದ್ದಾರೆ.

ದಟ್ಟವಾಗಿ ಮಂಜು ಆವರಿಸಿದ್ದು, ಅಡಿ ದೂರದಲ್ಲಿ ಇರುವವರೇ ಕಾಣದಂತಹಾ ಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವರಾರರು ಪರದಾಟ ನಡೆಸುವಂತಾಯಿತು. ಕೆಲವು ಪ್ರಯಾಣಿಕರು 10 ಕಿ.ಮೀ.‌ ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.

Leave a Comment

Your email address will not be published. Required fields are marked *