Ad Widget .

ಕಾಸರಗೋಡು: ಬ್ಯಾಂಕ್ ಮ್ಯಾನೇಜರ್, ಪತಿ, ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಕಾಸರಗೋಡು ಶಾಖೆಯ ಮ್ಯಾನೇಜರ್‌, ಅವರ ಪತಿ ಮತ್ತು ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Ad Widget . Ad Widget .

ಮೃತರನ್ನು ಮ್ಯಾನೇಜರ್‌ ಶೀನಾ (35), ಅವರ ಪತಿ ಸಬೀಶ್ (37), ಮಕ್ಕಳಾದ ಹರಿಗೋವಿಂದ್ (6), ಮತ್ತು ಶ್ರೀವರ್ಧನ್ (2.5) ಎಂದು ಗುರುತಿಸಲಾಗಿದೆ. ಶೀನಾ ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು

Ad Widget . Ad Widget .

ಸಬೀಶ್‌ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಬೀಶ್‌ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ. ಶೀನಾ ಕೆಲವು ದಿನಗಳ ಹಿಂದೆಯಷ್ಟೇ ಎಸ್‌ಬಿಐಯ ಕಾಸರಗೋಡು ಶಾಖೆಗೆ ವರ್ಗಾವಣೆಗೊಂಡಿದ್ದರು.

Leave a Comment

Your email address will not be published. Required fields are marked *